ಮಂಗಳೂರು: ನಗರದ ಪ್ರಮುಖ ವಸತಿ ಪ್ರದೇಶಗಳಲ್ಲಿ ಒಂದಾದ ಮೇರಿಹಿಲ್‌ನ ಮಹಾಲಸಾ ದೇವಳ ರಸ್ತೆಯಲ್ಲಿ ಚರಂಡಿ ಮ್ಯಾನ್‌ಹೋಲ್ ಆಗಾಗ ಉಕ್ಕಿ ಹರಿಯುತ್ತಿರುವುದು ಸ್ಥಳೀಯ ನಿವಾಸಿಗಳು, ವಿದ್ಯಾರ್ಥಿಗಳು ಮತ್ತು ಭಕ್ತರಿಗೆ ತೀವ್ರ ತೊಂದರೆಯನ್ನುಂಟು ಮಾಡುತ್ತಿದೆ. ಹಲವು ಸಮಯಗಳಿಂದ ಈ ಸಮಸ್ಯೆ ಮರುಕಳಿಸುತ್ತಿದ್ದು, ಶಾಶ್ವತ ಪರಿಹಾರ ಕಲ್ಪಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.