

ಚಿತ್ತಾಪುರ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರ ಬಂಧನ ಹಾಗೂ ಕಾಂಗ್ರೆಸ್ ಸರ್ಕಾರದ ದುರಾಡಳಿತ ಖಂಡಿಸಿ 28ರಂದು ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಭಾರತೀಯ ಜನತಾ ಪಕ್ಷದ ತಾಲೂಕು ಅಧ್ಯಕ್ಷ ನೀಲಕಂಠ ಪಾಟೀಲ್ ತಿಳಿಸಿದರು.
ಬಿಜೆಪಿ ಕಚೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 28ರಂದು ಬೆಳಗ್ಗೆ ಪಟ್ಟಣದ ಅಕ್ಕಮಹಾದೇವಿ ಮಂದಿರದಿಂದ ಪ್ರತಿಭಟನೆ ಮೆರವಣಿಗೆ ಆರಂಭವಾಗಿ ಲಾಡ್ಜೀಂಗ್ ಕ್ರಾಸ್ ಮೂಲಕ ತಹಸಲ್ ಕಚೇರಿ ತಲುಪಲಿದೆ. ಆವರಣದಲ್ಲಿ ಹೋರಾಟ ನಡೆಸಿ, ತಹಸೀಲ್ದಾರ್ಗೆ ಮನವಿಪತ್ರ ಸಲ್ಲಿಸಲಾಗುವುದು. ರಾಜ್ಯ, ಜಿಲ್ಲೆಯ ಅನೇಕ ಬಿಜೆಪಿ ಮುಖಂಡರು, ಜನಪ್ರತಿನಿಧಿಗಳು ಸೇರಿ ಸುಮಾರು 5 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ನಗರ ಅಧ್ಯಕ್ಷ ಮಲ್ಲಿಕಾರ್ಜುನ ಪೂಜಾರಿ, ಮುಖಂಡ ಶಂಕರ ಚವ್ಹಾಣ, ಪ್ರಮುಖರಾದ ನಾಗರಾಜ ಭಂಕಲಗಿ, ನಾಗರಾಜ ಹೂಗಾರ, ರಾಮದಾಸ ಚವ್ಹಾಣ, ಕೋಟೇಶ್ವರ ರೇಶ್ಮಿ, ಶರಣಪ್ಪ ಸಣಮೊ, ನಾಗೂಬಾಯಿ ಜಿತುರೆ, ಅಕ್ಕಮಹಾದೇವಿ ನಾಗೇಶ ಇನ್ನಿತರಿದ್ದರು.