ಮಾಣಿಲ ಶ್ರೀಧಾಮ ಶ್ರೀದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ೪೮ ದಿನಗಳ ಬಾಲಭೋಜನ ಸಹಿತ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆಯ ಸಮಾರೋಪ

Published on

ವಿಟ್ಲ: ಮಾಣಿಲ ಶ್ರೀಧಾಮ ಶ್ರೀದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆಯ ಬೆಳ್ಳಿಹಬ್ಬ ಮಹೋತ್ಸವದ ವಿಶೇಷ ಸಂಭ್ರಮ, ೪೮ ದಿನಗಳ ಬಾಲಭೋಜನ ಸಹಿತ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆಯ ಸಮಾರೋಪ ಹಾಗೂ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪ್ರತಾಚರಣೆ ಆ.೨೪ರಿಂದ ಆ.೨೭ರವರೆಗೆ ನಡೆಯಲಿದೆ.

ಆ.೨೪ರಂದು ಬೆಳಗ್ಗೆ ೬ರಿಂದ ಗಣಪತಿ ಯಾಗ, ಪಂಚಾಮೃತಾಭಿಷೇಕ, ಕಲ್ಪೋಕ್ತ ಲಕ್ಷ್ಮೀ ಪೂಜೆ, ವಾಯನದಾನ, ಶ್ರೀ ಗುರುಪೂಜೆ, ಶ್ರೀ ನಾಗದೇವರಿಗೆ ಕ್ಷೀರಾಭಿಷೇಕ, ಗೋಮಾತಾ ಪೂಜೆ, ಮಧ್ಯಾಹ್ನ ೧೨ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಸಾಯಂಕಾಲ ದತ್ತ ಯಾಗ, ಬಾಲಭೋಜನ ಸಮಾಪ್ತಿ, ಸ್ಥಳೀಯ ಪ್ರತಿಭೆಗಳಿಂದ ವಿವಿಧ ವಿನೋದಾವಳಿಗಳು ನಡೆಯಲಿದೆ.

ಸಾಯಂಕಾಲ ೬ರಿಂದ ಧಾರ್ಮಿಕ ಸಭೆ ನಡೆಯಲಿದ್ದು, ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಮಾಡಲಿದ್ದು, ಅಧ್ಯಕ್ಷತೆಯನ್ನು ಉಡುಪಿ ಕೊಡವೂರು ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಅಧ್ಯಕ್ಷ ಕೊಡವೂರು ದಿವಾಕರ ಶೆಟ್ಟಿ ವಹಿಸಲಿದ್ದಾರೆ. ಕುಕ್ಕಾಜೆ ಶ್ರೀ ಕಾಳಿಕಾಂಬಾ ಅಂಜನೇಯ ಕ್ಷೇತ್ರದ ಧರ್ಮದರ್ಶಿ ಶ್ರೀಕೃಷ್ಣ ಗುರೂಜಿ, ಮರವೂರು ಶ್ರೀ ನಿತ್ಯಾನಂದ ಮಂದಿರದ ಸಾಧ್ವಿ ಗೀತಾನಂದಿನಿ, ಉಡುಪಿ ಶಾಸಕ ಯಶಪಾಲ್ ಸುವರ್ಣ ಮತ್ತಿತರರ ಗಣ್ಯರು ಭಾಗವಹಿಸಲಿದ್ದಾರೆ.

ಯಕ್ಷಗಾನ ಕ್ಷೇತ್ರದ ಅಶೋಕ್ ಶೆಟ್ಟಿ ಸರಪಾಡಿ, ಉದ್ಯಮ ಕ್ಷೇತ್ರದ ರಮಾನಂದ ಬಂಗೇರ ನಾಸಿಕ್, ಸಾಮಾಜಿಕ ಕ್ಷೇತ್ರದ ಯಜ್ಞೇಶ್ವರ್ ಬರ್ಕೆ, ಉದ್ಯಮ ಕ್ಷೇತ್ರದ ಯು. ರಾಮ ಉಪ್ಪಿನಂಗಡಿ, ಸಾಮಾಜಿಕ ಕ್ಷೇತ್ರದ ಸಚ್ಚೀಂದ್ರ ಅಮೀನ್ ಬರ್ಕೆ ಅವರಿಗೆ ಸನ್ಮಾನ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net