

ಉಡುಪಿ : ಶಿವಳ್ಳಿ ಗ್ರಾಮದ ನೆಹರು ನಗರದಲ್ಲಿರುವ ಮನೆಯಲ್ಲಿ 2.40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಪ್ರಾಪ್ತರ ಸಹಿತ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮೂಡು ಅಲೆವೂರು ಆದರ್ಶ ನಗರದ ವರುಣ (19 ವರ್ಷ) ಕಾರ್ತಿಕ ಪೂಜಾರಿ ( 19 ವರ್ಷ) ಹಾಗೂ ಕಾನೂನು ಸಂಘರ್ಷಕ್ಕೆ ಒಳಗಾದ 2 ಬಾಲಕರನ್ನು ಪೆರಂಪಳ್ಳಿ ಶೀಂಬ್ರಾ ಕ್ರಾಸ್ ಬಳಿ ವಶಕ್ಕೆ ಪಡೆದು ದಸ್ತಗಿರಿ ಮಾಡುವಲ್ಲಿ ಮಣಿಪಾಲ ಯಶಸ್ವಿಯಾಗಿದ್ದಾರೆ.
ಆರೋಪಿಗಳಿಂದ ಕಳವು ಮಾಡಿದ 2,40,000 ಮೌಲ್ಯದ ಚಿನ್ನಾಭರಣ ಮತ್ತು 1 ಸ್ಕೂಟರ್ ಹಾಗೂ ಕೃತ್ಯಕ್ಕೆ ಬಳಸಿದ 1 ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಈ ಹಿಂದೆ ಕುಂದಾಪುರ ಠಾಣಾ ವ್ಯಾಪ್ತಿಗೆ ಸಂಬಂಧಪಟ್ಟಂತೆ 2 ಪ್ರಕರಣಗಳು ಹಾಗೂ ಮಣಿಪಾಲ ಠಾಣೆಯ 1 ಪ್ರಕರಣ ಸೇರಿ ಒಟ್ಟು 3 ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಈ 3 ಪ್ರಕರಣಗಳನ್ನು ಭೇದಿಸಿ ಆರೋಪಿತರಿಂದ ಸುಮಾರು 4 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.