

ಅಂಕೋಲಾ: ಕ್ರೀಡೆ ಎಂಬುದು ಸಂಘಟಿತ, ಸ್ಪರ್ಧಾತ್ಮಕ ಮತ್ತು ಕುಶಲತೆಯಿಂದ ಕೂಡಿದ ದೈಹಿಕ ಚಟುವಟಿಕೆಯಾಗಿದೆ ಎಂದು ತಹಸೀಲ್ದಾರ್ ಅಶೋಕ ಎನ್. ಭಟ್ ಹೇಳಿದರು.
ಜಿಪಂ, ತಾಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ತಾಲೂಕು ಯುವ ಒಕ್ಕೂಟದ ಆಶ್ರಯದಲ್ಲಿ ಇಲ್ಲಿಯ ಜೈಹಿಂದ್ ಮೈದಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ತಾಲೂಕು ಯುವ ಒಕ್ಕೂಟದ ಅಧ್ಯಕ್ಷ ಗೋಪು ನಾಯಕ ಅಡ್ಲೂರು ಮಾತನಾಡಿ, ಕ್ರೀಡೆ ನಮ್ಮ ಜೀವನದ ಪ್ರಮುಖ ಭಾಗವಾಗಿದೆ. ಇದು ದೈಹಿಕ ಮತ್ತು ಮಾನಸಿಕವಾಗಿ ನಮ್ಮ ಅಭಿವೃದ್ಧಿಯ ಮೂಲದ ಜತೆ ಆರೋಗ್ಯಕರ ಮನಸು ಹೊಂದಲು ಸಹಕಾರಿಯಾಗಲಿದೆ ಎಂದರು. ತಾಪಂ ಪ್ರಭಾರ ಇಒ ಸುನೀಲ ಎಂ. ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಿವೃತ್ತ ಶಿಕ್ಷಕರಾದ ರಫೀಕ ಶೇಖ್, ದೇವರಾಯ ಗೋಳಿಕಟ್ಟೆ, ಸಹಾಯಕ ಯುವಜನ ಸೇವಾ ಮತ್ತು ಕ್ರೀಡಾಧಿಕಾರಿ ಪ್ರಶಾಂತ ಗಾಂವಕರ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ದೇವರಾಯ ನಾಯಕ, ಮಂಜುನಾಥ ನಾಯ್ಕ ಉಪಸ್ಥಿತರಿದ್ದರು. ದೈಹಿಕ ಶಿಕ್ಷಕ ರಾಮಪ್ಪ ಜೋಗೇರ ನಿರ್ವಹಿಸಿದರು.