ಮಣಿಪುರ ದೌರ್ಜನ್ಯ ಪ್ರಕರಣದಿಂದ ದೇಶವೇ ತಲೆ ತಗ್ಗಿಸುವಂತಾಗಿದೆ

IMG-20230725-WA0026.jpg
Published on

ಬೆಳಗಾವಿ  : ದೇಶದಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯಗಳ ವ್ಯಾಪಕವಾಗಿ ಹೆಚ್ಚಾಗುತ್ತಿದ್ದರೂ ಯಾವುದೇ ಕಠಿಣ ಕ್ರಮ ಕೈಗೊಳ್ಳದೇ ಮೌನವಹಿಸಿರುವುದು ಖಂಡನೀಯ. ಕೂಡಲೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ದೇಶಾದ್ಯಂತ ದೌರ್ಜನ್ಯ ತಡೆಯಲು ಹಾಗೂ ಶಾಂತಿ ನೆಲೆಸುವಂತೆ ಕ್ರಮ ಜರುಗಿಸಬೇಕು ಎಂದು ವಿವಿಧ ಸಂಘಟನೆಗಳ ವತಿಯಿಂದ ಮಂಗಳವಾರ ಸರ್ಕಾರವನ್ನು ಒತ್ತಾಯಿಸಲಾಯಿತು.
 

ಭಾರತೀಯ ಕೃಷಿಕ ಸಮಾಜ, ಸಂಯುಕ್ತ ಹೋರಾಟ ಕರ್ನಾಟಕ ಹಾಗೂ ಏದ್ದೇಳು ಕರ್ನಾಕ ಸಂಘಟಣೆ ಪದಾಧಿಕಾರಿಗಳು ನಗರದಲ್ಲಿನ ಕನ್ನಡ ಸಾಹಿತ್ಯ ಭವನದಿಂದ ಜಿಲ್ಲಾಧಿಕಾರಿ ಕಚೇರಿವರಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಮಹಿಳಾ ದೌರ್ಜನ್ಯ ನಡೆಸಿದವರ ವಿರುದ್ಧ ಆಕ್ರೋಶ ಹೊರಹಾಕಿದ ಅವರು, ಮಣಿಪುರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿ, ಲೈಂಗಿಕ್ ದೌರ್ಜನ್ಯ ನೀಡಿರುವ ಪ್ರಕರಣ ವಿಶ್ವಗುರು ಭಾರತಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಳಂಕವಾಗುತ್ತಿದ್ದು, ಕೂಡಲೇ ಕೇಂದ್ರ ಸರ್ಕಾರ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಿದ್ದಗೌಡ ಮೋದಗಿ, ಶಿವಲೀಲಾ ಮಿಸಾಳೆ, ಜಿ.ರಾಜು, ಸುಜಿತ್ ಮುಳಗುಂದ, ಜಿ.ಬಿ.ಕುಲಕರ್ಣಿ, ಕೆ.ಸಿ.ನಾಗರಾಜ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net