ಅಪರಾಧಿಗಳನ್ನು ಕಠಿಣ ಶಿಕ್ಷಗೆ ಒಳಪಡಿಸಿ

ಸಿಂಧನೂರಿನಲ್ಲಿ ಸಿಪಿಐ(ಎಂಎಲ್) ರೆಡ್ ಸ್ಟಾರ್ ಪಕ್ಷ ಭಾನುವಾರ ಪ್ರತಿಭಟನೆ ನಡೆಸಿತು. ಪಕ್ಷದ ರಾಜ್ಯ ಸಮಿತಿ ಸದಸ್ಯ ಎಂ.ಗಂಗಾಧರ, ತಾಲೂಕು ಕಾರ್ಯದರ್ಶಿ ಮಾಬುಸಾಬ ಬೆಳ್ಳಟ್ಟಿ, ಸದಸ್ಯ ಹೆಚ್.ಆರ್.ಹೊಸಮನಿ ಇದ್ದರು.
ಸಿಂಧನೂರಿನಲ್ಲಿ ಸಿಪಿಐ(ಎಂಎಲ್) ರೆಡ್ ಸ್ಟಾರ್ ಪಕ್ಷ ಭಾನುವಾರ ಪ್ರತಿಭಟನೆ ನಡೆಸಿತು. ಪಕ್ಷದ ರಾಜ್ಯ ಸಮಿತಿ ಸದಸ್ಯ ಎಂ.ಗಂಗಾಧರ, ತಾಲೂಕು ಕಾರ್ಯದರ್ಶಿ ಮಾಬುಸಾಬ ಬೆಳ್ಳಟ್ಟಿ, ಸದಸ್ಯ ಹೆಚ್.ಆರ್.ಹೊಸಮನಿ ಇದ್ದರು.
Published on

ಸಿಂಧನೂರು: ಮಣಿಪುರದಲ್ಲಿ ಮಹಿಳೆಬ್ಬರನ್ನು ಬೆತ್ತಲೆ ಮೆರವಣಿಗೆ ಮಾಡಿರುವುದನ್ನು ಖಂಡಿಸಿ ಸಿಪಿಐ(ಎಂಎಲ್) ರೆಡ್ ಸ್ಟಾರ್ ಪಕ್ಷ ನಗರದಲ್ಲಿ ಭಾನುವಾರ ಪ್ರತಿಭಟನೆ ನಡೆಸಿತು.

ಮುಖ್ಯಮಂತ್ರಿ ರಾಜೀನಾಮೆ ಸಲ್ಲಿಸಲಿ

ಮಣಿಪುರದಲ್ಲಿ ನಡೆದ ಘಟನೆ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಘಟನೆ ಹೊನೆಹೊತ್ತು ಮುಖ್ಯಮಂತ್ರಿ ರಾಜೀನಾಮೆ ಸಲ್ಲಿಸಬೇಕು. ರಾಜ್ಯ ಸರ್ಕಾರವನ್ನು ವಜಗೊಳಿಸಬೇಕು. ಮೆರವಣಿಗೆ ಮಾಡಿದ ಅಪರಾಧಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಸಂತ್ರಸ್ತ ಕುಕಿ ಜನರ ಎತ್ತಂಗಡಿ ನಿಲ್ಲಿಸಬೇಕು. ಸಂತ್ರಸ್ತರಿಗೆ ತಲಾ ಒಂದು ಕೋಟಿ ರೂ. ಪರಿಹಾರ ನೀಡಬೇಕು. ಗುಡ್ಡಗಾಡು ಜನರ ಸ್ವಾಯತ್ತ ಅಧಿಕಾರದ ಹಕ್ಕನ್ನು ಮರುಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

ಪಕ್ಷದ ರಾಜ್ಯ ಸಮಿತಿ ಸದಸ್ಯ ಎಂ.ಗಂಗಾಧರ, ತಾಲೂಕು ಕಾರ್ಯದರ್ಶಿ ಮಾಬುಸಾಬ ಬೆಳ್ಳಟ್ಟಿ, ಸದಸ್ಯ ಹೆಚ್.ಆರ್.ಹೊಸಮನಿ, ಮುದಿಯಪ್ಪ ಹನುಮನಗರ ಕ್ಯಾಂಪ್, ಸತ್ಯಮ್ಮ, ಈರಪ್ಪ, ಮುತ್ತಣ್ಣ, ಶಂಕ್ರಪ್ಪ, ರಾಚಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net