ಮಣಿಯಂಪಾರೆ ಬಸ್ ತಂಗುದಾಣ ಲೋಕಾರ್ಪಣೆ

New Project (10)
Published on

ಪೆರ್ಲ: ಶೇಣಿ ಶ್ರೀ ಶಾರದಾಂಬಾ ವಿದ್ಯಾಸಂಸ್ಥೆಯ ಎಯುಪಿ ಹಾಗೂ ಪ್ರೌಢಶಾಲಾ ವಿಭಾಗದ ಸ್ಕೌಟ್ಸ್ ಮತ್ತು ಗೈಡ್ಸ್ ಟಕಗಳು ಸ್ನೇಹಪೂರ್ವ ಪದ್ಧತಿ ಅಂಗವಾಗಿ ಎಣ್ಮಕಜೆ ಪಂಚಾಯಿತಿ ಬೆದ್ರಂಪಳ್ಳ ವಾರ್ಡಿನ ಮಣಿಯಂಪಾರೆಯಲ್ಲಿ ನಿರ್ಮಿಸಿದ ಬಸ್ ತಂಗುದಾಣ ಉದ್ಘಾಟನೆ ಮಂಗಳವಾರ ನಡೆಯಿತು.

ಮಂಜೇಶ್ವರ ಶಾಸಕ ಎಕೆಎಂ ಆಶ್ರಫ್ ಉದ್ಘಾಟಿಸಿದರು. ಎಣ್ಮಕಜೆ ಗ್ರಾ.ಪಂ. ಅಧ್ಯಕ್ಷ ಸೋಮಶೇಖರ ಜೆ.ಎಸ್. ಅಧ್ಯಕ್ಷತೆ ವಹಿಸಿದ್ದರು. ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಶಶಿಧರ ಎಂ., ಗೈಡ್ಸ್ ಜಿಲ್ಲಾ ಕಮೀಷನರ್ ಶ್ರೀಕುಮಾರಿ, ವಾರ್ಡ್ ಸದಸ್ಯ ರಾಧಾಕೃಷ್ಣ ನಾಯಕ್ ಜೆ.ಎಸ್., ಪಂಚಾಯಿತಿ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಎಸ್.ಗಾಂಭೀರ್, ಪಂ.ಸದಸ್ಯೆ ಕುಸುಮಾವತಿ, ಗ್ರಾ.ಪಂ.ಮಾಜಿ ಅಧ್ಯಕ್ಷೆ ಪ್ರೇಮಾ ಎಂ., ಹೈಯರ್ ಸೆಕೆಂಡರಿ ಶಾಲಾ ಪ್ರಾಂಶುಪಾಲ ಶಾಸ್ತ ಕುಮಾರ್, ರಕ್ಷಕ ಶಿಕ್ಷಕ ಸಂದ ಅಧ್ಯಕ್ಷ ವಿಲ್ಸನ್ ಡಿಸೋಜ, ಪಿಟಿಎ ಉಪಾಧ್ಯಕ್ಷ ಉಮ್ಮರ್ ಕಂಗಿನಮೂಲೆ, ಮಾತೃ ಸಂದ ಅಧ್ಯಕ್ಷೆ ಜಯಲಕ್ಷ್ಮೀ ಯು.ಪಿ., ಪಿಟಿಎ ಅಧ್ಯಕ್ಷ ಅಬೂಬಕರ್ ಪೆರ್ದನೆ, ಸ್ಕೌಟ್ ಜಿಲ್ಲಾ ಕಾರ್ಯನಿರ್ವಾಹಕ ವಿಜಯ ಕುಮಾರ್ ಮೊದಲಾದವರಿದ್ದರು.

ಮುಖ್ಯಶಿಕ್ಷಕಿ ಗೀತಾ ಬಿ.ಆರ್.ಸ್ವಾಗತಿಸಿದರು. ಗೈಡ್ಸ್ ಕ್ಯಾಪ್ಟನ್ ಸಜಿತಾ ಕೆ. ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net