ಪ್ರಗತಿಯಲ್ಲಿ ಕ್ರೀಡಾಂಗಣಗಳ ಕಾಮಗಾರಿ: ಮಹದೇವಪುರ ಅಭಿವೃದ್ಧಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಮಂಜುಳಾ ಲಿಂಬಾವಳಿ

Manjula Limbavali
Published on

ಮಹದೇವಪುರ: ಕ್ಷೇತ್ರದಲ್ಲಿ ಕ್ರೀಡೆಗಳಿಗೆ ಹೆಚ್ಚು ಆದ್ಯತೆ ನೀಡುವ ನಿಟ್ಟಿನಲ್ಲಿ ಹೂಡಿ ಒಳಾಂಗಣ ಕ್ರೀಡಾಂಗಣ, ಗುಂಜೂರು ವಾಜಪೇಯಿ ಕ್ರೀಡಾಂಗಣ, ದೊಡ್ಡಕನ್ನಳ್ಳಿ, ಕಾಡುಗುಡಿ ಗ್ರಾಮಗಳಲ್ಲಿ ರಾಷ್ಟ್ರೀಯಮಟ್ಟದ ಕ್ರೀಡಾಂಗಣಗಳ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದೆ ಎಂದು ಬಿಜೆಪಿ ಅಭ್ಯರ್ಥಿ ಮಂಜುಳಾ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.

ಸಾದರಮಂಗಳ, ಸಾದರಮಂಗಳ ಸ್ಲಂ ಬೋರ್ಡ್, ಕೊಡಿಗೇಹಳ್ಳಿ, ಅಯ್ಯಪ್ಪನಗರ, ಹೂಡಿ, ರಾಜಪಾಳ್ಯ, ತಿಗಳರಪಾಳ್ಯ ಸೇರಿ ವಿವಿಧೆಡೆ ಪ್ರಚಾರ ನಡೆಸಿ ಮಾತನಾಡಿದರು.

ಅಂತರ್ಜಲ ಮಟ್ಟ ಸುಧಾರಿಸಲು ಹಾಗೂ ಜೀವವೈವಿಧ್ಯ ಸುಧಾರಿಸುವ ನಿಟ್ಟಿನಲ್ಲಿ 60ಕ್ಕೂ ಹೆಚ್ಚು ಕೆರೆಗಳನ್ನು ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ಅಭಿವೃದ್ಧಿಪಡಿಸಿರುವುದು ಬಿಜೆಪಿ ಕಾರ್ಯವೈಖರಿಗೆ ಕನ್ನಡಿಯಾಗಿದೆ. ಅಂತರ್ಜಲ ಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಕೆರೆ ಹಾಗೂ ಕಲ್ಯಾಣಿಗಳ ಅಭಿವೃದ್ಧಿ ಮಾಡಲಾಗುತ್ತಿದ್ದು, ಜಲಮೂಲಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ಕ್ಷೇತ್ರದ ಅತಿದೊಡ್ಡ ಕೆರೆಗಳಾದ ಬೆಳ್ಳಂದೂರು, ವರ್ತರು, ರಾಂಪುರ ಹಾಗೂ ಎಲೆ ಮಲ್ಲಪ್ಪ ಶೆಟ್ಟಿ ಕೆರೆಗಳ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿದೆ ಎಂದು ಮಂಜುಳಾ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net