ಸೋಮನಾಥಪುರ ಗ್ರಾಪಂ ಅಧ್ಯಕ್ಷರಾಗಿ ಮಂಜೇಶ್ ಗೌಡ ಆಯ್ಕೆ

05 may tnp 04
ತಿ.ನರಸೀಪುರ ತಾಲೂಕಿನ ಸೋಮನಾಥಪುರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಕೆ.ಪಿ.ಮಂಜೇಶ್ ಗೌಡ ಸೋಮವಾರ ಅವಿರೋಧವಾಗಿ ಆಯ್ಕೆಯಾದರು. ಜಯಪಾಲ ಭರಣಿ, ಗೀತಾ, ಕೆ.ಪಿ. ಪುಟ್ಟಸ್ವಾಮಿ, ಎಸ್. ಕಾಂತರಾಜು ಇತರರು ಇದ್ದರು.
Published on

ತಿ.ನರಸೀಪುರ: ತಾಲೂಕಿನ ಸೋಮನಾಥಪುರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಕೆ.ಪಿ.ಮಂಜೇಶ್ ಗೌಡ ಸೋಮವಾರ ಅವಿರೋಧವಾಗಿ ಆಯ್ಕೆಯಾದರು.

ಎಸ್.ರಾಜಣ್ಣ ಅವರು ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆಗೆ ಚುನಾವಣಾ ಸಭೆ ಕರೆಯಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಕೆ.ಪಿ.ಮಂಜೇಶ್ ಗೌಡ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾ ಸಭೆಗೆ 14 ಸದಸ್ಯರಲ್ಲಿ 13 ಮಂದಿ ಹಾಜರಾಗಿ ಅಧ್ಯಕ್ಷರ ಅವಿರೋಧ ಆಯ್ಕೆಗೆ ಅನುಮೋದನೆ ನೀಡಿದರು. ನಾಗರತ್ನಮ್ಮ ಗೈರು ಹಾಜರಾಗಿದ್ದರು. ಚುನಾವಣಾಧಿಕಾರಿಯಾಗಿ ಕಾವೇರಿ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರೋಹಿತ್ ಕುಮಾರ್ ಕಾರ್ಯ ನಿರ್ವಹಿಸಿದರು. ಅವಿರೋಧ ಆಯ್ಕೆ ಪ್ರಕಟಗೊಳ್ಳುತ್ತಿದ್ದಂತೆ ಅಧ್ಯಕ್ಷರ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಜಿಪಂ ಮಾಜಿ ಸದಸ್ಯ ಎಸ್.ವಿ.ಜಯಪಾಲಭರಣಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಗೀತಾ, ಪಿಡಿಒ ಶಶಿಕುಮಾರ್, ಕಾರ್ಯದರ್ಶಿ ಸುದೀರ್, ಸದಸ್ಯರಾದ ಕೆ.ಪಿ.ಪುಟ್ಟಸ್ವಾಮಿ, ಗೌರಮ್ಮ, ಎಸ್.ಕಾಂತರಾಜು, ಸುಂದರಮ್ಮ, ಹೇಮಾವತಿ, ಅರ್ಚನಾ, ಪುಟ್ಟಸಿದ್ದಮ್ಮ, ಸುವರ್ಣ, ಗಿರೀಶ್, ಎಸ್.ಸಿದ್ದಪ್ಪ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net