ರಾಷ್ಟ್ರೀಯ ಕ್ರೀಡಾಕೂಟಕ್ಕೆ ಮಂಜುಳಾ ಆಯ್ಕೆ

ಮಂಜುಳಾ ಆಯ್ಕೆ
ರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ಶ್ರೀಲಕ್ಷ್ಮೀ ಭೂವರಹಾನಾಥಸ್ವಾಮಿ ಬುದ್ದಿಮಾಂಧ್ಯ ಮಕ್ಕಳ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮುರುಕನಹಳ್ಳಿ ಗ್ರಾಮದ ವಿದ್ಯಾರ್ಥಿನಿ ಮಂಜುಳಾ ಸೇರಿದಂತೆ ಕ್ರೀಡೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳನ್ನು ಶಿಕ್ಷಕ ವೃಂದ ಅಭಿನಂದಿಸಿದರು. ಪ್ರೀತಿ, ಸುಷ್ಮಾ, ಟಿ.ನಿರಂಜನ್ ಇತರರಿದ್ದರು.
Published on

ಕೆ.ಆರ್.ಪೇಟೆ: ದಾವಣಗೆರೆಯ ಎಸ್.ಎಸ್.ಬಡಾವಣೆಯ ನೇತಾಜಿ ಸುಭಾಷ್‌ಚಂದ್ರ ಬೋಸ್ ಒಳಾಂಗಣ ಕ್ರೀಡಾಂಗಣದಲ್ಲಿ ಸ್ಪೆಷಲ್ ಒಲಿಂಪಿಕ್ಸ್ ಭಾರತ್-ಕರ್ನಾಟಕ ಸಂಸ್ಥೆ ಆಯೋಜಿಸಿದ್ದ ರಾಜ್ಯ ಅಂಗವಿಕಲರ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆ ಹೋಬಳಿಯ ಗಂಜಿಗೆರೆ ಗ್ರಾಮದಲ್ಲಿರುವ ಶ್ರೀಲಕ್ಷ್ಮೀ ಭೂವರಹಾನಾಥಸ್ವಾಮಿ ಬುದ್ದಿಮಾಂಧ್ಯ ಮಕ್ಕಳ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮುರುಕನಹಳ್ಳಿ ಗ್ರಾಮದ ವಿದ್ಯಾರ್ಥಿನಿ ಮಂಜುಳಾ ಪ್ರಥಮ ಸ್ಥಾನ ಪಡೆದು ಸೆ.5 ರಿಂದ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆಯುವ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.\

ಈಕೆಗೆ ಕೋಚ್ ಆಗಿ ಶಿಕ್ಷಕಿ ಪ್ರೀತಿ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಅಧ್ಯಕ್ಷೆ ಸುಷ್ಮಾ, ಕಾರ್ಯದರ್ಶಿ ಟಿ.ನಿರಂಜನ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net