

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ, ಮಣಿ ಕೃಷ್ಣಸ್ವಾಮಿ ಅಕಾಡೆಮಿ ವತಿಯಿಂದ ಭಾನುವಾರ ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಮಂಜುನಾದ -1 ಎಂಬ ಧರ್ಮಸ್ಥಳ ಕ್ಷೇತ್ರಕ್ಕೆ ಸಂಬಂಧಿಸಿದ ಕೃತಿಗಳನ್ನು ಲೋಕಾರ್ಪಣೆಗೊಳಿಸಿದರು.
ಮಂಗಳೂರು ವಿಶ್ವವಿದ್ಯಾಲಯ ಕುಲಪತಿ ಡಾ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಅಧ್ಯಕ್ಷತೆ ವಹಿಸಿದ್ದರು. ರಾಜ್ಯಸಭೆ ಸದಸ್ಯರಾಗಿ ನಾಮನಿರ್ದೇಶನಗೊಂಡ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಮಣಿಕೃಷ್ಣ ಸ್ವಾಮಿ ಅಕಾಡೆಮಿಯಿಂದ ಗೌರವಿಸಲಾಯಿತು. ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್, ಮಣಿಕೃಷ್ಣಸ್ವಾಮಿ ಅಕಾಡಮಿ ಗೌರವಾಧ್ಯಕ್ಷ ಡಾ.ಹರಿಕೃಷ್ಣ ಪುನರೂರು, ಹಿರಿಯ ಸಂಗೀತ ತಜ್ಞ ಮತ್ತು ಗುರು ಡಾ.ರಾಜ್‌ಕುಮಾರ್ ಭಾರತಿ ಉಪಸ್ಥಿತರಿದ್ದರು.
ಮಣಿಕೃಷ್ಣ ಅಕಾಡೆಮಿ ಕಾರ್ಯದರ್ಶಿ ಪಿ.ನಿತ್ಯಾನಂದ ರಾವ್ ಪ್ರಾಸ್ತಾವಿಸಿದರು. ಅಧ್ಯಕ್ಷ ಕ್ಯಾ.ಗಣೇಶ್ ಕಾರ್ಣಿಕ್ ಸ್ವಾಗತಿಸಿದರು. ಪ್ರಾಧ್ಯಾಪಕ ಡಾ.ಅರುಣ್ ಕುಮಾರ್ ಎಸ್.ಆರ್. ವಂದಿಸಿದರು. ರಾಮಾಂಜನೇಯ ಉಡುಪಿ, ಶ್ರೀನಿವಾಸ್ ರಾವ್ ಕಾರ್ಯಕ್ರಮ ನಿರೂಪಿಸಿದರು. ಸಮನ್ವಿ ಮತ್ತು ತಂಡ ಪ್ರಾರ್ಥಿಸಿದರು.