ಮನಮೋಹನ್ ಸಿಂಗ್ ಸೇವೆ ಅವಿಸ್ಮರಣೀಯ

Manmohan Singh's service is unforgettable
ಮಹಾಲಿಂಗಪುರದ ಚನ್ನಮ್ಮ ವೃತ್ತದಲ್ಲಿ ಮನಮೋಹನ್ ಸಿಂಗ್ ಹಾಗೂ ಯೋಧ ಮಹೇಶ ಮರಿಗೊಂಡ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಸಂಸದೆ ಪ್ರಭಾ ಮಲ್ಲಿಕಾರ್ಜುನ, ಪುರಸಭೆ ಅಧ್ಯಕ್ಷ ಯಲ್ಲನಗೌಡ ಪಾಟೀಲ ಮತ್ತಿತರರಿದ್ದಾರೆ.
Published on

ಮಹಾಲಿಂಗಪುರ: ದೇಶ ಕಂಡ ಆರ್ಥಿಕ ಕ್ರಾಂತಿ ಹರಿಕಾರ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಗಲಿಕೆ ದೇಶಕ್ಕೆ ತುಂಬಲಾರದ ನಷ್ಟ ಎಂದು ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹೇಳಿದರು.

ಶುಕ್ರವಾರ ಪಟ್ಟಣದ ಚನ್ನಮ್ಮ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಹುತಾತ್ಮ ಯೋಧ ಮಹೇಶ ಮರಿಗೊಂಡ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶದ ಅತ್ಯುತ್ತಮ ಆರ್ಥಿಕ ತಜ್ಞರಾಗಿ, 10 ವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ಸಿಂಗ್ ಅವರು ಸಲ್ಲಿಸಿದ ಸೇವೆ ಅವಿಸ್ಮರಣಿಯ. ಹುತಾತ್ಮನಾದ ಮಹಾಲಿಂಗಪುರದ ಯೋಧ ಮಹೇಶ ಮರಿಗೊಂಡ ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ. ಅವರ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದರು.

ಮನಮೋಹನ್ ಸಿಂಗ್ ಹಾಗೂ ಯೋಧ ಮಹೇಶ ಮರಿಗೊಂಡ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಮೊಂಬತ್ತಿ ಬೆಳಗಿ ಮೌನಾಚರಿಸಲಾಯಿತು.

ಸಂಸದೆ ಪ್ರಭಾ ಮಲ್ಲಿಕಾರ್ಜುನ, ಪುರಸಭೆ ಅಧ್ಯಕ್ಷ ಯಲ್ಲನಗೌಡ ಪಾಟೀಲ, ಕಾಂಗ್ರೆಸ್ ಮುಖಂಡರಾದ ಡಾ. ಎ.ಆರ್. ಬೆಳಗಲಿ, ಮಲ್ಲಪ್ಪ ಸಿಂಗಾಡಿ, ಬಲವಂತಗೌಡ ಪಾಟೀಲ, ಅಬ್ದುಲ್ ರಜಾಕ್ ಬಾಗವಾನ, ವಿಠ್ಠಲ ಸಂಶಿ, ರಾಜು ಗೌಡಪ್ಪಗೋಳ, ಪ್ರಕಾಶ ಮಮದಾಪೂರ, ನಾರಾಯಣ ಜೋಶಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net