

ಮಂಗಳೂರು : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕನ್ನಡ ಸಾಹಿತ್ಯ ಪರಿಷತ್ ಮೂಡುಬಿದಿರೆ ತಾಲೂಕು ಘಟಕದ ವತಿಯಿಂದ
ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ನೆನಪು ಕಾರ್ಯಕ್ರಮ ಆ.6ರಂದು ಮಧ್ಯಾಹ್ನ 3ಕ್ಕೆ ಮೂಡುಬಿದಿರೆ ವಿದ್ಯಾಗಿರಿಯ ಕುವೆಂಪು ಸಭಾಂಗಣದಲ್ಲಿ ನಡೆಯಲಿದೆ.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ
ಪಿ.ಬಿ.ಹರೀಶ್ ರೈ ಅವರು ದಿ.ಮನೋಹರ ಪ್ರಸಾದ್ ಸ್ಮರಣೆ ಭಾಷಣ ಮಾಡಲಿದ್ದಾರೆ.
ಕಸಾಪ ಮೂಡುಬಿದಿರೆ ತಾಲೂಕು ಘಟಕದ ಅಧ್ಯಕ್ಷ ಪ್ರೊ.ವೇಣುಗೋಪಾಲ್ ಶೆಟ್ಟಿ.ಕೆ., ಮೂಡುಬಿದಿರೆ ತಾ.ಪತ್ರಕರ್ತರ ಸಂಘದ
ಅಧ್ಯಕ್ಷ ಸೀತಾರಾಮ ಆಚಾರ್ಯ, ಕಾರ್ಯದರ್ಶಿ ಪ್ರಸನ್ನ ಹೆಗ್ಡೆ, ಮಂಗಳೂರು ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ.ಆರ್.,
ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಜಗನ್ನಾಥ ಶೆಟ್ಟಿ ಬಾಳ, ಇಬ್ರಾಹಿಂ ಅಡ್ಕಸ್ಥಳ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
..........................