'ಮನೋಹರ ಪ್ರಸಾದ್ ನೆನಪು' ಕಾರ್ಯಕ್ರಮ

WhatsApp Image 2024-08-06 at 5.18.36 PM
Published on



ಮೂಡುಬಿದಿರೆ : 'ಪತ್ರಕರ್ತರ ನಡುವಿನ ಸೂಪರ್ ಸ್ಟಾರ್ ಮನೋಹರ ಪ್ರಸಾದ್' ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಬಣ್ಣಿಸಿದರು.
ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮೂಡುಬಿದಿರೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಮೂಡುಬಿದಿರೆ ತಾಲ್ಲೂಕು ಘಟಕದ ಸಹಯೋಗದಲ್ಲಿ ಮಂಗಳವಾರ ನಡೆದ 'ಮನೋಹರ ಪ್ರಸಾದ್ ನೆನಪು' ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಾನು ಮತ್ತು ಮನೋಹರ್ ಸಮಕಾಲೀನರು ಹಾಗೂ ಗ್ರಾಮೀಣ ಸ್ಪಂದನೆಯವರು. ನಮ್ಮದು ಹುಚ್ಚು ಮನಸ್ಸಿನ ಹತ್ತು ಮುಖಗಳು. ಮನೋಹರ್ ಶಿಕ್ಷಕ ಆಗಿರಬೇಕಿತ್ತು . ಅಪೂರ್ವ ಜ್ಞಾಪಕ ಶಕ್ತಿ. ಸಮಯಕ್ಕೆ ತಕ್ಕಂತೆ ಸ್ಪಂದಿಸುತ್ತಿದ್ದ ಅವರೊಂದು ವಿಶ್ವಕೋಶ ಎಂದರು.
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಮಾತನಾಡಿ, ಮನೋಹರ ಪ್ರಸಾದ್ ಅವರ ನಿಧನದಿಂದ ಕರಾವಳಿ ಪತ್ರಿಕೋದ್ಯಮದಲ್ಲಿ ಒಂದು ಶ್ರೇಷ್ಠ ಅಧ್ಯಾಯ ಯುಗಾಂತ್ಯ ಕಂಡಿದೆ ಎಂದರು.
ಮನೋಹರ ಅವರು ಬರಹ ಮಾತ್ರವಲ್ಲದೇ ವ್ಯಕ್ತಿತ್ವದ ಮೂಲಕ ಪತ್ರಿಕೋದ್ಯಮಕ್ಕೆ ಹಲವರನ್ನು ಸೆಳೆದವರು ಎಂದರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮಾತನಾಡಿ, ಮನೋಹರ ಪ್ರಸಾದ್ ಅವರ ನೆನಪನ್ನು ಚಿರಸ್ಥಾಯಿಗೊಳಿಸುವ ಕಾರ್ಯಕ್ರಮಗಳನ್ನು ನಮ್ಮ ಸಂಘ ಹಮ್ಮಿಕೊಳ್ಳಲಿದೆ ಎಂದರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಇಬ್ರಾಹಿಂ ಅಡ್ಕಸ್ಥಳ, ಜಗನ್ನಾಥ ಶೆಟ್ಟಿ ಬಾಳ, ಇಬ್ರಾಹಿಂ ಅಡ್ಕಸ್ಥಳ, ಅನ್ನು ಮಂಗಳೂರು, ಭಾಸಕರ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ, ಮೂಡುಬಿದಿರೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸೀತಾರಾಮ ಆಚಾರ್ಯ ಇದ್ದರು.
ಕನ್ನಡ ಸಾಹಿತ್ಯ ಪರಿಷತ್ತಿನ ಮೂಡುಬಿದಿರೆ ತಾಲ್ಲೂಕು ಘಟಕದ ಅಧ್ಯಕ್ಷ ವೇಣುಗೋಪಾಲ ಶೆಟ್ಟಿ ಕೆ. ಕಾರ್ಯಕ್ರಮ ನಿರೂಪಿಸಿದರು.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net