ನ.1ರಂದು ದಿ.ಮನೋಹರ ಪ್ರಸಾದ್ ಸಂಸ್ಮರಣೆ

Manohar Prasad01mar2024
Published on


ಮಂಗಳೂರು : ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ನ.1ರಂದು ಸಾಯಂಕಾಲ 4ಕ್ಕೆ ಕುತ್ತಾರಿನ ಹೋಟೆಲ್ ವೆಜಿನೇಷನ್ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ, ದಿ.ಮನೋಹರ ಪ್ರಸಾದ್ ಸಂಸ್ಮರಣೆ ಮತ್ತು ಗೌರವ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯನ ನಿರ್ದೇಶಕ ರಾಜೇಶ್.ಜಿ. ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಾಜಿ ಶಾಸಕ ಕೆ.ಜಯರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅವರು ದಿ.ಮನೋಹರ ಪ್ರಸಾದ್ ಅವರ ಸಂಸ್ಮರಣೆ ಮಾಡಲಿದ್ದಾರೆ.
ಹಿರಿಯ ಪತ್ರಕರ್ತ ಮಲಾರ್ ಜಯರಾಮ ರೈ, ದೃಶ್ಯಗ್ರಾಹಕ ಜಯಂತ್ ಉಳ್ಳಾಲ್, ಛಾಯಾಗ್ರಾಹಕ ಜಾನ್ ಡಿಸೋಜಾ ಇವರುಗಳನ್ನು ಸನ್ಮಾನಿಸಲಾಗುವುದು. ಕಾರ್ಯನಿರತ ಪತ್ರಕರ್ತರ ಸಂಘದ ಉಳ್ಳಾಲ ತಾಲೂಕು ಘಟಕ ಅಧ್ಯಕ್ಷ ವಸಂತ ಕೊಣಾಜೆ.ಎನ್., ಸೌತ್ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಷನ್‌ನ ಉಳ್ಳಾಲ ವಲಯ ಅಧ್ಯಕ್ಷ ಪ್ರವೀಣ್ ಬೀರಿ ಮುಖ್ಯ ಅತಿಥಿಗಳಾಗಿ
ಭಾಗವಹಿಸಲಿದ್ದಾರೆ ಎಂದು ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಅಧ್ಯಕ್ಷ ದಿನಕರ ಉಳ್ಳಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net