ಹುಬ್ಬಳ್ಳಿ: ಇಲ್ಲಿಯ ಕೇಶ್ವಾಪುರದ ಸಂಸ್ಕಾರ ಶಾಲೆಗೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮನೋಜ ಜೈನ್ ಅವರು ಬುಧವಾರ ಭೇಟಿ ನೀಡಿ ಮಕ್ಕಳೊಂದಿಗೆ ಬೆರೆತರು.
ಬೆಳಗ್ಗೆ ಶಾಲೆಗೆ ಆಗಮಿಸಿದ ಅವರು ಮಕ್ಕಳ ಜತೆ ಪ್ರಾರ್ಥನೆಯಲ್ಲಿ ತೊಡಗಿದರು. ಸ್ವಚ್ಛ ಹಾಗೂ ಹಸಿರು ಕ್ಯಾಂಪಸ್ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು.
ತಾಳ್ಮೆ, ನಿರಂತರ ಪರಿಶ್ರಮದಿಂದ ಮಾತ್ರ ಯಶಸ್ಸು ಸಿಗಲು ಸಾಧ್ಯ. ಹಾಗಾಗಿ ವಿದ್ಯಾರ್ಥಿಗಳು ಶಿಸ್ತುಬದ್ಧವಾಗಿ ಅಧ್ಯಯನ ಮಾಡಬೇಕು ಎಂದು ಅವರು ಸಲಹೆ ನೀಡಿದರು.
ಸಂಸ್ಕಾರ ಶಾಲೆ ಸಂಸ್ಥಾಪಕ ಮಹೇಂದ್ರ ಸಿಂಘಿ, ಪ್ರಾಚಾರ್ಯ ನೈನಾ ಪಿ.ಸಿ. ಉಪಪ್ರಾಚಾರ್ಯ ಅನು ಮಸ್ಕರ, ಇತರರು ಇದ್ದರು.