

ಶಿರಸಿ: ನಗರದ ಎಂಇಎಸ್‌ನ ಎಂ.ಎಂ. ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಬಿಎಸ್ಸಿ ಅಂತಿಮ ವರ್ಷದ ವಿದ್ಯಾರ್ಥಿ ಮನೋಜ್ ಅಂಬಿಗ ಚದುರಂಗ ಕ್ರೀಡೆಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ತಂಡಕ್ಕೆ ಬ್ಲೂ ಆಗಿ ಆಯ್ಕೆಯಾಗಿದ್ದಾರೆ.
ಜ. 8ರಿಂದ 11 ರವರೆಗೆ ಚೆನ್ನೈನ ವೆಲ್ಟೆಕ್ ಆರ್‌ಡಿ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಯಲ್ಲಿ ಆಯೋಜಿಸಿರುವ ದಕ್ಷಿಣ ವಲಯದ ಅಂತರ ವಿಶ್ವವಿದ್ಯಾಲಯ ಮಟ್ಟದ ಚದುರಂಗ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ವಿದ್ಯಾರ್ಥಿ ಸಾಧನೆಗೆ ಎಂಇಎಸ್ ಅಧ್ಯಕ್ಷ ಜಿ. ಎಂ. ಹೆಗಡೆ ಮುಳಖಂಡ, ಉಪಸಮಿತಿ ಅಧ್ಯಕ್ಷ ಎಸ್.ಕೆ. ಭಾಗವತ್, ಪ್ರಾಚಾರ್ಯ ಪ್ರೊ ಜಿ. ಟಿ. ಭಟ್, ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.