ಭಾರತ ತಂಡದಲ್ಲಿ ಸ್ಥಾನ ಗಿಟ್ಟಿಸಿದ ಮನೋರಂಜನ್

Published on

ಹುಣಸೂರು:ಮೇ 16ರಿಂದ 21ರವರೆಗೆ ಮಲೇಷ್ಯಾದ ಕೌಲಾಲಂಪುರ್ ಮತ್ತು ಶ್ರೀಲಂಕಾದ ಕೊಲಂಬೋದಲ್ಲಿ ಆಯೋಜನೆಗೊಂಡಿರುವ ಅಂತಾರಾಷ್ಟ್ರೀಯ ಮಟ್ಟದ ಸಿಸ್ಟೋಬಾಲ್ ಪಂದ್ಯಾವಳಿಯಲ್ಲಿ ಮನೋರಂಜನ್ ಭಾರತ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಪಂದ್ಯಾವಳಿ ಕುರಿತಂತೆ ಕೋಚಿಂಗ್ ಕ್ಯಾಂಪ್ ಬೆಂಗಳೂರಿನ ನಾಗಾರ್ಜುನ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net