

ಬಳ್ಳಾರಿ: ಯುವಜನತೆಯ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಎ್ಕೆಸಿಸಿಐನಿಂದ ‘ಮಂಥನ’ ಎಂಬ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಯಶವಂತರಾಜ್ ನಾಗಿರೆಡ್ಡಿ ಹೇಳಿದರು.
ನಗರದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಂಥನ-2025 ಕಾರ್ಯಕ್ರಮದಲ್ಲಿ ಮಾತನಾಡಿದರು. ಯುವಶಕ್ತಿ ಬೆಳವಣೆಗೆ ನಮ್ಮ ಸಂಸ್ಥೆಯಿಂದ ಬಡ ವಿದ್ಯಾರ್ಥಿಗಳಿಗೆ ಹಾಗೂ ಗ್ರಾಮೀಣ ಮಹಿಳೆಯರಿಗೆ ಕೌಶಲಧಾರಿತ ತರಬೇತಿ ನೀಡಿ ಉದ್ಯೋಗ ಸೃಷ್ಟಿಸುವಲ್ಲಿ ಯಶ್ವಸಿಯಾಗಿದೆ ಎಂದು ತಿಳಿಸಿದರು.
ಮಂಥನ ಸಮಿತಿ ಅಧ್ಯಕ್ಷೆ ಬಿ.ಎ.ತೇಜಶ್ರೀ ಮಾತನಾಡಿ, ವಿದ್ಯಾರ್ಥಿಗಳಲ್ಲಿರುವ ಸೃಜನಶೀಲತೆ, ಕ್ರಿಯಾಶೀಲತೆ ಜತೆ ಹೊಸ ವ್ಯವಹಾರಿಕ ಯೋಚನೆ, ಬಂಡವಾಳ ಸಂಗ್ರಹ ಮತ್ತು ಹೂಡಿಕೆಯ ವಿಚಾರಗಳನ್ನು ಹೊರಹಾಕಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಎ್ಕೆಸಿಸಿಐ ‘ಮಂಥನ-2025’ ಹಮ್ಮಿಕೊಳ್ಳಲಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಯುವಕರಲ್ಲಿ ವಿಶೇಷ ಪ್ರತಿಭೆ ಇದೆ. ಈ ಭಾಗದಲ್ಲಿ ದೈನಂದಿನ ಸಮಸ್ಯೆಗಳ ಪರಿಹಾರಕ್ಕೆ ಆಧುನಿಕ ಸ್ಪರ್ಶದಿಂದ ಯಶಸ್ವಿಯಾಗಬಹುದು ಎಂದರು.
ವಿಎಸ್‌ಕೆ ವಿವಿ ಕುಲಪತಿ ಪ್ರೊ.ಎಂ.ಮುನಿರಾಜ್ ಮಾತನಾಡಿ, ಎ್ಕೆಸಿಸಿಐ ಕೇವಲ ವ್ಯಾಪಾರ ಮತ್ತು ವಾಣಿಜ್ಯೋದ್ಯಮಿಗಳಿಗೆ ಸೀಮಿತವಾಗದೇ ವಿದ್ಯಾರ್ಥಿಗಳಿಗಾಗಿ ‘ಮಂಥನ’ ಕಾರ್ಯಕ್ರಮವನ್ನು ರೂಪಿಸಿದೆ. ಇದು ಯುವ ಚಿಂತನೆಗಳಿಗೆ ಮುಕ್ತ ಅವಕಾಶ ನೀಡುತ್ತದೆ ಎಂದರು.