

ಕುಶಾಲನಗರ:
ಕುಶಾಲನಗರ ತಾಲೂಕಿಗೆ ಸಂಬAಧಿಸಿದ ಎಲ್ಲಾ ಕಚೇರಿಗಳನ್ನು ಒಂದೇ ಸೂರಿನಡಿ ತರುವ ಉದ್ದೇಶದಿಂದ 8 ಕೋಟಿ ರೂ. ವೆಚ್ಚದಲ್ಲಿ ಆಡಳಿತ ಭವನ ನಿರ್ಮಿಸಲಾಗುವುದು ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ತಿಳಿಸಿದರು. ಉದ್ದೇಶಿತ ಆಡಳಿತ ಭವನ ನಿರ್ಮಾಣಕ್ಕೆ ನಿಗದಿಯಾಗಿರುವ ಸರ್ಕಾರಿ ಪಾಲಿಟೆಕ್ನ್ ಬಳಿಯ ಜಾಗ ಪರಿಶೀಲಿಸಿದ ನಂತರ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದರು.
ಜಿಲ್ಲಾಡಳಿತ ಭವನ ನಿರ್ಮಾಣಕ್ಕೆ 4 ಎಕರೆ ಪ್ರದೇಶ ಪಾಲಿಟೆಕ್ನಿಕ್ ಕಾಲೇಜಿನ ಆವರಣದ ಒಳಗಡೆ ಮಂಜೂರು ಮಾಡಬೇಕಾಗಿದೆ. ಉನ್ನತ ಶಿಕ್ಷಣ ಇಲಾಖೆಯ ಅದೀನದಲ್ಲಿರುವ ಈ ಪ್ರದೇಶವನ್ನು ಕಂದಾಯ ಇಲಾಖೆಗೆ ವರ್ಗಾವಣೆ ಮಾಡಿಕೊಡುವುದರ ಮೂಲಕ ಆಡಳಿಯ ಭವನ ನಿರ್ಮಾಣ ಕಾಮಗಾರಿಗೆ ವೇಗ ನೀಡಬೇಕಾಗಿದೆ ಎಂದರು.
ಇದಕ್ಕೂ ಮೊದಲು ಶಿಥಿಲಾವಸ್ಥೆಗೆ ತಲುಪಿರುವ ಕಣಿವೆ ತೂಗು ಸೇತುವೆಗೆ ಶಾಸಕ ಡಾ. ಮಂತರ್ ಗೌಡ ಭೇಟಿ ನೀಡಿದ್ದರು. ಶಾಸಕರ ಅನುದಾನದಲ್ಲಿ ತೂಗು ಸೇತುವೆ, ಸೈಡ್ ವಾಲ್ ನಿರ್ಮಾಣಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೂಡಿಗೆ ಬಳಿ ಹಾರಂಗಿ ಮತ್ತು ಕಾವೇರಿ ನದಿ ಸಂಗಮ ಪ್ರದೇಶದಲ್ಲಿ ಕುಶಾಲನಗರ ಮತ್ತು ಪಿರಿಯಾಪಟ್ಟಣಕ್ಕೆ ಕುಡಿಯುವ ನೀರೊದಿಗಿಸುವ 40 ಕೋಟಿ ರೂ. ವೆಚ್ಚದ ಕಾಮಗಾರಿ ಪರಿಶೀಲಿಸಿದರು. ಜಾಯಂಟ್ ಜಾಕ್ ವೆಲ್ ನಿರ್ಮಾಣ, ಪೈಪ್‌ಲೈನ್‌ಗಳ ವ್ಯವಸ್ಥೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಮುಂದಿನ ಎರಡು ವರ್ಷಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವುದಾಗಿ ಅಧಿಕಾರಿಗಳು ತಿಳಿಸಿದರು.
ಈ ಸಂದರ್ಭ ಮಾತನಾಡಿದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ವಿ.ಪಿ. ಶಶಿಧರ್, ಕುಶಾಲನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದರೆ 40 ಕೋಟಿ ರೂ. ವೆಚ್ಚದ ಈ ಕುಡಿಯುವ ನೀರಿನ ಯೋಜನೆ ಮೂಲಕ ಹಾರಂಗಿ ಜಲಾಶಯದಿಂದ ನೀರು ಹಾಯಿಸಿ ಸಮಸ್ಯೆ ಪರಿಹರಿಸಬಹುದು. ಕುಶಾಲನಗgದಲ್ಲಿ 365 ದಿನಗಳು ನಿರಂತರವಾಗಿ ಯಾವುದೇ ಅಡಚಣೆ ಇಲ್ಲದೆ ಕುಡಿಯುವ ನೀರಿನ ಸಮಸ್ಯೆ ನಿಭಾಯಿಸಲು ಸಾಧ್ಯವಿದೆ ಎಂದು ಹೇಳಿದರು.
ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪ್ರದೇಶದಲ್ಲಿ ಕಾಮಗಾರಿ ನಡೆಯುತ್ತಿರುವ ಪ್ರದೇಶಕ್ಕೆ ಭೇಟಿ ನೀಡಿದ ಶಾಸಕ ಡಾಕ್ಟರ್ ಮಂತರ್ ಗೌಡ ಹತ್ತು ಸಾವಿರ ಲೀಟರ್ ಸಾಮರ್ಥ್ಯದ ನೀರಿನ ಬೃಹತ್ ಟ್ಯಾಂಕ್ ನಿರ್ಮಾಣದ ಬಗ್ಗೆ ಸ್ಥಳೀಯ ಅಧಿಕಾರಿಗಳೊಂದಿಗೆ ಮಾತನಾಡಿದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ, ವಿವಿಧ ಇಲಾಖೆ ಅಧಿಕಾರಿಗಳು, ಕುಶಾಲನಗರ ತಹಸೀಲ್ದಾರ್ ಕಿರಣ್ ಗೌರಯ್ಯ, ಸ್ಥಳೀಯ ಮುಖಂಡರಾದ ಕೆ.ಪಿ. ಚಂದ್ರಕಲಾ, ಮಂಜುನಾಥ್ ಗುಂಡೂರಾವ್, ಕುಡಾ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಎಂ. ಕೆ. ದಿನೇಶ್, ಜೋಸೆಫ್ ವಿಕ್ಟರ್ ಸೋನ್ಸ್ ಇತರರು ಇದ್ದರು.