ಮಂತ್ರಾಲಯ ಮಠದಿಂದ ರಕ್ಷಣಾ ನಿಧಿಗೆ 25 ಲಕ್ಷ ರೂ. ದೇಣಿಗೆ

subudhendra teertha swamiji
subudhendra teertha swamiji
Published on

ರಾಯಚೂರು ದೇಶದ ರಕ್ಷಣಾ ನಿಧಿಗೆ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಿಂದ 25 ಲಕ್ಷ ರೂ. ದೇಣಿಗೆಯನ್ನು ನೀಡಲಾಗುತ್ತದೆಂದು ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಘೋಷಣೆ ಮಾಡಿದರು.

ಶ್ರೀಮಠದಲ್ಲಿ ಸೋಮವಾರ ಸಂಜೆ ಶ್ರೀಗಳ 13ನೇ ಪಟ್ಟಾಭಿಷೇಕ ಮಹೋತ್ಸವದಲ್ಲಿ ಭಕ್ತರಿಂದ ತುಲಾಭಾರ ಕಾರ್ಯಕ್ರಮದ ನಂತರ ಮಾತನಾಡಿ, ದೇಶದಲ್ಲಿ ಅಶಾಂತಿ ಉಂಟಾಗಿದೆ. ತಾತ್ಕಾಲಿಕವಾಗಿ ಯುದ್ಧ ವಿರಾಮ ದೊರಕಿದೆ. ರಾತ್ರಿ ಹಗಲು, ಮಳೆ, ಬಿಸಿಲು ಎನ್ನದೇ ಪ್ರಾಣವನ್ನೂ ಲೆಕ್ಕಿಸದೇ ದೇಶದ ರಕ್ಷಣೆಗಾಗಿ ನಮ್ಮೆಲ್ಲ ಯೋಧರು ಶ್ರಮಿಸುತ್ತಿದ್ದಾರೆ.

ಜಾಗೃತರಾಗಿ, ವಿವೇಚನಾ ಪೂರ್ವಕವಾಗಿ ದೇಶದ ಸಮಗ್ರತೆಗೆ, ರಕ್ಷಣೆ, ಭದ್ರತೆಗೆ ಕೇಂದ್ರ ಸರ್ಕಾರ ಶ್ರಮಿಸುತ್ತಿದೆ. ದೇಶದಲ್ಲಿ ಅಶಾಂತಿ ಪರಸ್ಥಿತಿ ಹಿನ್ನೆಲೆ ಸರಳವಾಗಿ ಕಾರ್ಯಕ್ರಮ ಆಚರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ದೇಶದ ರಕ್ಷಣೆ ನಮ್ಮೇಲ್ಲರ ಹೊಣೆಯಾಗಿದ್ದು, ಆದರಿಂದ ಶ್ರೀಮಠದಿಂದ ರಕ್ಷಣಾ ನಿಧಿಗೆ 25 ಲಕ್ಷ ರೂ ನೀಡಲಾಗುತ್ತದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net