ಸುಶಮೀಂದ್ರ ತೀರ್ಥರ ಆರಾಧನಾ ಮಹೋತ್ಸವ

Mantralayam rathostava
ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ಪೂರ್ವ ಪೀಠಾಧಿಪತಿ ಶ್ರೀ ಸುಶಮೀಂದ್ರ ತೀರ್ಥರ ಆರಾಧನಾ ಮಹೋತ್ಸವ ನಿಮಿತ್ತ ಶನಿವಾರ ಸ್ವರ್ಣ ರಥೋತ್ಸವ ಜರುಗಿತು.
Published on

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಪೂರ್ವ ಪೀಠಾಧಿಪತಿ ಶ್ರೀ ಸುಶಮೀಂದ್ರ ತೀರ್ಥರ ಆರಾಧನಾ ಮಹೋತ್ಸವ ನಿಮಿತ್ತ ಶನಿವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀ ಸುಶಮೀಂದ್ರ ತೀರ್ಥರ ಬೃಂದಾವನಕ್ಕೆ ಪಂಚಾಮೃತ ಅಭಿಷೇಕ ಹಾಗೂ ವಿಶೇಷ ಪೂಜೆ ಸಲ್ಲಿಸಲಾಯಿತು. ಶ್ರೀಗಳ ಭಾವಚಿತ್ರವಿಟ್ಟು ಸ್ವರ್ಣ ರಥೋತ್ಸವ ನೆರವೇರಿಸಲಾಯಿತು.

ಶ್ರೀವೆಂಕಟೇಶ್ವರ ದೇವರ ಶೇಷ ವಸ್ತ್ರ

ಟಿಟಿಡಿ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ವೀರಬ್ರಹ್ಮೇಂದ್ರ ತಂದ ತಿರುಮಲದ ಶ್ರೀವೆಂಕಟೇಶ್ವರ ದೇವರ ಶೇಷ ವಸ್ತ್ರವನ್ನು ಶ್ರೀಮಠದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಶ್ರೀಗಳ ಬೃಂದಾವನಕ್ಕೆ ಸಮರ್ಪಣೆ ಮಾಡಿದರು. ನಂತರ ವಿದ್ಯಾಪೀಠದ ಪಂಡಿತರಿಂದ ಪ್ರವಚನ ಕಾರ್ಯಕ್ರಮ ನಡೆಯಿತು. ಶ್ರೀಮಠದ ವ್ಯವಸ್ಥಾಪಕ ಎಸ್.ಕೆ.ಶ್ರೀನಿವಾಸರಾವ್, ಅಧಿಕಾರಿಗಳಾದ ವೆಂಕಟೇಶ ಜೋಷಿ, ಡಾ.ವಾದಿರಾಜಾಚಾರ್ ಹಾಗೂ ಭಕ್ತರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net