ನಾನೇ ಬಿಜೆಪಿ ಅಭ್ಯರ್ಥಿ, ಸಂದೇಹ ಬೇಡ, ಮಾಜಿ ಶಾಸಕ ಗಂಗಾಧರ ನಾಯಕ ಹೇಳಿಕೆ

Gangadhara Nayak Ex MLA Manvi
ಗಂಗಾಧರನಾಯಕ, ಮಾಜಿ ಶಾಸಕ.
Published on

ಮಾನ್ವಿ: ಬಳ್ಳಾರಿಯಲ್ಲಿ ನ.20 ರಂದು ಬಿಜೆಪಿ ಎಸ್ಟಿ ಮೋರ್ಚಾ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಪರಿಶಿಷ್ಟ ಜಾತಿ, ಪಂಗಡದ ಮೀಸಲಾತಿ ಹೆಚ್ಚಿಸಿರುವ ಬಿಜೆಪಿಯ ಈ ಕಾರ್ಯಕ್ರಮದಲ್ಲಿ ಪಕ್ಷಭೇದ ಮರೆತು ಭಾಗವಹಿಸಬೇಕು ಎಂದು ಮಾಜಿ ಶಾಸಕ, ಎಸ್ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಗಂಗಾಧರ ನಾಯಕ ಹೇಳಿದರು.

ಪಟ್ಟಣದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಸಮಾವೇಶಕ್ಕೆ ತೆರಳಲು ಮಾನ್ವಿಯಿಂದ 150ಕ್ಕೂ ಹೆಚ್ಚು ಬಸ್ ಸೌಲಭ್ಯ ಕಲ್ಪಿಸಿದ್ದು ಸುಮಾರು 15 ಸಾವಿರ ಜನರು ಭಾಗವಹಿಸಲಿದ್ದಾರೆ. ತಳ ಸಮುದಾಯಗಳ ಸರ್ವಾಂಗೀಣ ಅಭಿವೃದ್ಧಿಗೆ ಬಿಜೆಪಿ ಶ್ರಮಿಸಿದೆ. 2023ರ ಚುನಾವಣೆಯಲ್ಲಿ ಮಾನ್ವಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸಲಿದ್ದೇನೆ. ಇದರಲ್ಲಿ ಯಾವುದೇ ಸಂದೇಹ ಬೇಡ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net