ಪ್ರವೀಣ್ ಕೊಲೆಗಡುಕರಿಗೆ ಕಠಿಣ ಶಿಕ್ಷೆಯಾಗಲಿ

270722 Manvi BJP Yuva Morcha Appeal
ಮಾನ್ವಿ ಉಪ ತಹಸಿಲ್ದಾರ್ ಅಬ್ದುಲ್ ವಾಹಿದ್‌ಗೆ ಬಿಜೆಪಿ ಯುವ ಮೋರ್ಚಾ ಮಂಡಲ ಘಟಕದಿಂದ ಬುಧವಾರ ಮನವಿ ಸಲ್ಲಿಸಲಾಯಿತು.
Published on

ಮಾನ್ವಿ: ಬಿಜೆಪಿ ಯುವ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲೆ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆಗಡುಕರನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಆಗ್ರಹಿಸಿ ಉಪತಹಸೀಲ್ದಾರ್ ಅಬ್ದುಲ್ ವಾಹಿದ್‌ಗೆ ಬಿಜೆಪಿ ಯುವ ಮೋರ್ಚಾ ಮಂಡಲ ಘಟಕದಿಂದ ಬುಧವಾರ ಮನವಿ ಸಲ್ಲಿಸಲಾಯಿತು.

ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸೂಕ್ತ ಭದ್ರತೆ ನೀಡಬೇಕು, ರಾಜ್ಯದಲ್ಲಿ ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ಕಾರ್ಯಕರ್ತರ ಹತ್ಯೆಗಳು ನಡೆಯುತ್ತಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು. ಬಿಜೆಪಿ ಯುವ ಮೋರ್ಚಾ ಮಂಡಲ ಅಧ್ಯಕ್ಷ ನವೀನ್‌ಕುಮಾರ ನಾಡಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಪ್ಪಗೌಡ ನಕ್ಕುಂದಿ, ಎಸ್‌ಟಿ ಮೋರ್ಚಾ ಜಿಲ್ಲಾಧ್ಯಕ್ಷ ಅಯ್ಯಪ್ಪನಾಯಕ ಮ್ಯಾಕಲ್, ಗುರುಗೌಡ ಕಣ್ಣೂರು, ಹನುಮಂತ್ರಾಯ ನಾಯಕ ವಕೀಲ, ನರಸಪ್ಪ ಜೂಕೂರು, ದೊಡ್ಡಣ್ಣ ಹೂಗಾರ, ಮಂಜುನಾಥ ನಾಯಕ ಜಾನೇಕಲ್, ಭಾಸ್ಕರ್ ಜಗ್ಲಿ, ಮೋಹನ್ ದಾನಿ, ರಾಜೇಶ ವಟಗಲ್, ಹನುಮೇಶ ನಾಯಕ, ಸೈಯದ್ ಚಾಂದ್ ಪಾಷ, ಈರಣ್ಣ, ಗಿರಿನಾಯಕ, ಶಿವಾರೆಡ್ಡಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net