

ಮಾನ್ವಿ : ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಮರ್ಥವಾಗಿ ಎದುರಿಸುವ ಉದ್ದೇಶದಿಂದ ಸುಖಿ ಸಂಸ್ಥೆಯಿಂದ ಏರ್ಪಡಿಸಿರುವ ಉಚಿತ ತರಬೇತಿ ಕಾರ್ಯಾಗಾರದ ಪ್ರಯೋಜನ ಪಡೆದುಕೊಳ್ಳಬೇಕೆಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ರವಿಕುಮಾರ ಪಾಟೀಲ್ ಹೇಳಿದರು.
ಪಟ್ಟಣದ ಎಸ್‌ಆರ್‌ಎಸ್‌ವಿ ಪದವಿ ಮಹಾವಿದ್ಯಾಲಯದಲ್ಲಿ ಸುಖಿ ಸಂಸ್ಥೆಯಿಂದ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಕೆಎಎಸ್, ಪಿಎಸೈ, ಎಸ್ಡಿಎ, ಎಫ್‌ಡಿಎ, ಪೊಲೀಸ್ ಕಾನ್‌ಸ್ಟೇಬಲ್ ಸೇರಿ ಇತರ ಉದ್ಯೋಗ ಅವಕಾಶಗಳನ್ನು ಪಡೆಯಲು ತರಬೇತಿ ಅಗತ್ಯವಾಗಿದೆ. ಉಚಿತ ತರಬೇತಿ ಶಿಬಿರಗಳನ್ನು ಸದುಪಯೋಗಪಡಿಸಿಕೊಂಡು ವಿವಿಧ ಹುದ್ದೆಗಳನ್ನು ಪಡೆಯಬೇಕೆಂದು ತಿಳಿಸಿದರು. ಸಹಾಯಕ ಪ್ರಾಧ್ಯಾಪಕ ಅಮರೇಶ ಪೋತ್ನಾಳ್, ಧಾರವಾಡದ ಜಗದೀಶ ತರಬೇತಿ ನೀಡಿದರು.