ಸೌಹಾರ್ದದಿಂದ ಜೀವನ ನಡೆಸಲೀ

mnv-1
ಮಾನ್ವಿಯ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಭಾನುವಾರ ಏರ್ಪಡಿಸಿದ್ದ ಗಣರಾಜೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹಂಪಯ್ಯ ನಾಯಕ ಮಾತನಾಡಿದರು. ಪುರಸಭೆ ಅಧ್ಯಕ್ಷೆ ಲಕ್ಷ್ಮೀ ಡಿ. ವೀರೇಶ, ತಹಸೀಲ್ದಾರ್ ರಾಜು ಪಿರಂಗಿ ಇತರರಿದ್ದರು.
Published on

ಮಾನ್ವಿ: ಡಾ.ಅಂಬೇಡ್ಕರ್ ರಚಿಸಿದ ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು ಎಂದು ಶಾಸಕ ಹಂಪಯ್ಯ ನಾಯಕ ಹೇಳಿದರು.

ಪಟ್ಟಣದ ಬಾಲಕರ ಸರ್ಕಾರಿ ಪಪೂ ಕಾಲೇಜ್ ಮೈದಾನದಲ್ಲಿ ಭಾನುವಾರ ಗಣರಾಜೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಭಾರತದಲ್ಲಿ ಹಲವು ಜಾತಿ, ಧರ್ಮ, ಪಂಗಡಗಳ ಜನರು ಸೌಹಾರ್ದದಿಂದ ಬಾಳುತ್ತಿರುವುದಕ್ಕೆ ಸಂವಿಧಾನದಲ್ಲಿನ ಅಂಶಗಳೇ ಕಾರಣವಾಗಿದೆ ಎಂದರು.

ವಿವಿಧ ಶಾಲೆಗಳ ಮಕ್ಕಳು ಹಾಗೂ ಭಾರತ ಸೇವಾದಳದ ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ವಿವಿಧ ಶಾಲೆಯ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳಿಗೆ ನೃತ್ಯ ಪ್ರರ್ದಶನ ನೀಡಿದರು. ಸಾಂಸ್ಕೃತಿಕ ಕಲೆಗಳನ್ನು ಪ್ರದರ್ಶಿಸಿದರು. ಪಥಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಉತ್ತಮ ಪ್ರದರ್ಶನ ನೀಡಿದ ತಂಡಗಳಿಗೆ ಬಹುಮಾನ ನೀಡಲಾಯಿತು. ತಹಸೀಲ್ದಾರ್ ರಾಜು ಪಿರಂಗಿ ಧ್ವಜಾರೋಹಣ ನೆರವೇರಿಸಿದರು.

ಪುರಸಭೆ ಅಧ್ಯಕ್ಷೆ ಲಕ್ಷ್ಮೀ ಡಿ. ವೀರೇಶ ಅಧ್ಯಕ್ಷತೆ ವಹಿಸಿದ್ದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಗಫೂರ್‌ಸಾಬ್, ಪುರಸಭೆ ಸದಸ್ಯ ರಾಜಾ ಮಹೇಂದ್ರನಾಯಕ, ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಬಿ.ಕೆ.ಅಮರೇಶಪ್ಪ, ಸೈಯದ್ ಖಾಲೀದ್ ಖಾದ್ರಿ, ಗ್ರೇಡ್-2 ತಹಸಿಲ್ದಾರ್ ಅಬ್ದುಲ್ ವಾಹಿದ್, ತಾಪಂ ಇಒ ಖಾಲೀದ್ ಅಹಮದ್, ಪುರಸಭೆ ಮುಖ್ಯಾಧಿಕಾರಿ ಪರಶುರಾಮ ದೇವರಮಾನೆ, ಪಿ.ಐ. ವೀರಭದ್ರಯ್ಯಸ್ವಾಮಿ, ಸಿಡಿಪಿಒ ಮನ್ಸೂರ್ ಅಹಮದ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net