ಸಮಾನ ವೇತನ, ಸೇವಾ ಭದ್ರತೆ ಕಲ್ಪಿಸಿ

160222 Manvi BSP Appeal
ಮಾನ್ವಿ ತಹಸೀಲ್ದಾರ್ ಎಲ್.ಡಿ.ಚಂದ್ರಕಾಂತಗೆ ಬಿಎಸ್‌ಪಿ ತಾಲೂಕು ಘಟಕದ ಪ್ರಮುಖರು ಬುಧವಾರ ಮನವಿ ಸಲ್ಲಿಸಿದರು.
Published on

ಮಾನ್ವಿ: ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಗುತ್ತಿಗೆ ಮತ್ತು ಹೊರ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರ ಬೇಡಿಕೆಗಳನ್ನು ಈಡೆರಿಸುವಂತೆ ಒತ್ತಾಯಿಸಿ ಬುಧವಾರ ಬಿಎಸ್‌ಪಿ ತಾಲೂಕು ಘಟಕದಿಂದ ತಹಸೀಲ್ದಾರ್ ಎಲ್.ಡಿ.ಚಂದ್ರಕಾಂತಗೆ ಮನವಿ ಸಲ್ಲಿಸಲಾಯಿತು.

ಎರಡೂ ಇಲಾಖೆಗಳಲ್ಲಿ ಹಲವು ವರ್ಷಗಳಿಂದ 30 ಸಾವಿರಕ್ಕೂ ಹೆಚ್ಚು ನೌಕರರು ಕೆಲಸ ಮಾಡುತ್ತಿದ್ದಾರೆ ಆದರೆ ಇವರಿಗೆ ಸಮಾನ ವೇತನ, ಸೇವಾ ಭದ್ರತೆ ಇಲ್ಲ. ನಿವೃತ್ತ ಅಧಿಕಾರಿ ಶ್ರೀನಿವಾಸಾಚಾರಿ ವರದಿ ಅನುಷ್ಠಾನಗೊಳಿಸಲು ನೌಕರರು ಅನೇಕ ವರ್ಷಗಳಿಂದ ಹೋರಾಟ ಮಾಡುತ್ತಿದ್ದರೂ ಸರ್ಕಾರ ನಿರ್ಲಕ್ಷಿಸಿದೆ. ಇದರಿಂದಾಗಿ ಫೆ.21 ರಿಂದ ಹೋರಾಟ ಆರಂಭಿಸಲಾಗುವುದು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net