ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವುದಾಗಿ ಹೇಳಿದ ಶಾಸಕ ರಾಜಾ ವೆಂಕಟಪ್ಪನಾಯಕ

Kapagal Village Development Work
ಮಾನ್ವಿ ತಾಲೂಕಿನ ಕಪಗಲ್ ಗ್ರಾಮದಲ್ಲಿ ಶಾಸಕ ರಾಜಾ ವೆಂಕಟಪ್ಪನಾಯಕ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು.
Published on

ಮಾನ್ವಿ: ಮಾನ್ವಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿ ಗ್ರಾಮಗಳಲ್ಲಿ ಮೂಲ ಸೌಲಭ್ಯಗಳನ್ನು ಒದಗಿಸಲು ಹೆಚ್ಚಿನ ಒತ್ತು ನೀಡುವುದಾಗಿ ಶಾಸಕ ರಾಜಾ ವೆಂಕಟಪ್ಪನಾಯಕ ಹೇಳಿದರು.

ತಾಲೂಕಿನ ಕಪಗಲ್ ಗ್ರಾಮದಲ್ಲಿ 2020-21ನೇ ಸಾಲಿನ ಕೆಕೆಆರ್‌ಡಿಬಿ ಯೋಜನೆಯಡಿ 20 ಲಕ್ಷ ರೂ. ವೆಚ್ಚದ ಓವರ್‌ಹೆಡ್ ಟ್ಯಾಂಕ್ ಹಾಗೂ 30 ಲಕ್ಷ ರೂ. ವೆಚ್ಚದಲ್ಲಿ ಎರಡು ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗಳಿಗೆ ಸೋಮವಾರ ಶಂಕುಸ್ಥಾಪನೆ ನೇರವೇರಿಸಿ ಮಾತನಾಡಿದರು. ಗ್ರಾಮೀಣ ಪ್ರದೇಶಗಳಲ್ಲಿನ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ತೊಂದರೆಯಾಗದಂತೆ ಹೆಚ್ಚುವರಿ ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಲಾಗಿದೆ ಎಂದರು.

ಕ್ಷೇತ್ರದಲ್ಲಿ ಈಗಾಗಲೇ ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ನೀಡಲಾಗಿದೆ. ಗ್ರಾಮಗಳಲ್ಲಿ ರಸ್ತೆ, ಕುಡಿವ ನೀರು ಇತರೆ ಮೂಲ ಸೌಲಭ್ಯಗಳಿಗೆ ಕೂಡ ಅಭಿವೃದ್ಧಿಗೆ ಒತ್ತು ಕೊಡುವೆ ಎಂದು ಹೇಳಿದರು.

ಜೆಡಿಎಸ್ ರಾಜ್ಯ ಯುವ ಘಟಕದ ಉಪಾಧ್ಯಕ್ಷ ರಾಜಾ ರಾಮಚಂದ್ರನಾಯಕ, ಕಪಗಲ್ ಗ್ರಾಪಂ ಅಧ್ಯಕ್ಷ ನಾಗನಗೌಡ ಬೊಮ್ಮನಾಳ, ಹಂಪನಗೌಡ ನೀರಮಾನ್ವಿ, ಬಿಇಓ ವೆಂಕಟೇಶ ಗುಡಿಹಾಳ, ಗ್ರಾಪಂ ಸದಸ್ಯರು, ಗ್ರಾಮದ ಮುಖಂಡರು, ಶಾಲೆಯ ಮುಖ್ಯಶಿಕ್ಷಕರು, ಶಿಕ್ಷಕ ವರ್ಗ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net