ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ

161122 Adavi Amareshwar Competition on Environment Conservation
ಅಡವಿ ಅಮರೇಶ್ವರ ಸರ್ಕಾರಿ ಪ್ರೌಢಶಾಲೆಯಲ್ಲಿ ಪರಿಸರ ಸಂರಕ್ಷಣೆ ಕುರಿತು ಏರ್ಪಡಿಸಿದ್ದ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಮಂಗಳವಾರ ಪ್ರಮಾಣಪತ್ರ ನೀಡಲಾಯಿತು.
Published on

ಮಾನ್ವಿ: ಪರಿಸರ ಸಂರಕ್ಷಣೆ ನಮ್ಮ ಹೊಣೆಯಾಗಿದ್ದು, ಈ ಕುರಿತು ಜಾಗೃತಿ ಮೂಡಿಸುವ ಕೆಲಸವೂ ಆಗಬೇಕಿದೆ ಎಂದು ಎಎಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಾ ಶ್ಯಾಮಸುಂದರನಾಯಕ ಹೇಳಿದರು.

ಅಡವಿಅಮರೇಶ್ವರ ಸರ್ಕಾರಿ ಫ್ರೌಢಶಾಲೆಯಲ್ಲಿ ಮುದ್ದಂಗುಡ್ಡಿ ಬೆಳಗು ಟ್ರಸ್ಟ್‌ನಿಂದ ಆಯೋಜಿಸಿದ್ದ ಪರಿಸರ ಸಂರಕ್ಷಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಂಗಳವಾರ ಮಾತನಾಡಿದರು. ಗಿಡಮರಗಳನ್ನು ಉಳಿಸಿ ಬೆಳೆಸಿದರೆ ಉತ್ತಮ ವಾತಾವರಣ ಸಾಧ್ಯ. ಇದರಿಂದ ಸಕಾಲಕ್ಕೆ ಮಳೆ ಹಾಗೂ ಬೆಳೆ ಬರಲಿದೆ. ಶುದ್ಧ ವಾತಾವರಣಕ್ಕಾಗಿ ಪರಿಸರ ಸಂರಕ್ಷಣೆ ಅಗತ್ಯವಾಗಿದೆ ಎಂದರು.

ಅರಣ್ಯಾಧಿಕಾರಿ ಎಂ.ಡಿ.ಮುದಸ್ಸಿರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶಿಕ್ಷಣದೊಂದಿಗೆ ಪರಿಸರ ಸಂರಕ್ಷಣೆ ಕುರಿತು ತಿಳುವಳಿಕೆ ಅಗತ್ಯ. ವಿದ್ಯಾರ್ಥಿಗಳು ಸಾಮಾನ್ಯಜ್ಞಾನ ಅಧ್ಯಯನ ಮಾಡಬೇಕೆಂದು ತಿಳಿಸಿದರು. ವನಸಿರಿ ಫೌಂಡೇಷನ್ ಅಧ್ಯಕ್ಷ ಶರಣಬಸವ ಕೊಟ್ನೆಕಲ್, ಶಿಕ್ಷಕರ ಸಂಘದ ತಾಲೂಕು ಘಟಕದ ಖಜಾಂಚಿ ಶಿವಾಜಿ, ಶಿಕ್ಷಕ ಗೋಪಾಲಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net