ಭಾರತದ ಪ್ರಗತಿಗೆ ಬಾಬು ಜಗಜೀವನರಾಮ್ ಕೊಡುಗೆ ಅಪಾರ

JAGAJEEVANARAM
ಮಾನ್ವಿ ತಹಸಿಲ್ ಕಚೇರಿ ಸಭಾಂಗಣದಲ್ಲಿ ಗುರುವಾರ ತಾಲೂಕು ಆಡಳಿತದಿಂದ ಡಾ.ಬಾಬು ಜಗಜೀವನರಾಮ್ ಜಯಂತಿ ಆಚರಿಸಲಾಯಿತು. ತಹಸೀಲ್ದಾರ್ ಎಲ್.ಡಿ. ಚಂದ್ರಕಾಂತ್, ಪುರಸಭೆ ಮುಖ್ಯಾಧಿಕಾರಿ ವೆಂಕಟಸ್ವಾಮಿ ಇದ್ದರು.
Published on

ಮಾನ್ವಿ: ದೇಶದ ಪ್ರಗತಿಗೆ ಮಾಜಿ ಉಪ ಪ್ರಧಾನಿ ಬಾಬು ಜಗಜೀವನರಾಮ್ ಕೊಡುಗೆ ಅಪಾರ ಎಂದು ತಹಸೀಲ್ದಾರ್ ಎಲ್.ಡಿ. ಚಂದ್ರಕಾಂತ್ ಹೇಳಿದರು.

ಪಟ್ಟಣದ ತಹಸಿಲ್ ಕಚೇರಿ ಸಭಾಂಗಣದಲ್ಲಿ ಗುರುವಾರ ತಾಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಡಾ.ಬಾಬು ಜಗಜೀವನರಾಮ್ ಪುಣ್ಯ ಸ್ಮರಣೆ ನಿಮಿತ್ತ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದರು.

ಬಾಬುಜಿ ಅವರು ಕೇಂದ್ರ ಕೃಷಿ ಸಚಿವರಾಗಿ ದೇಶದಲ್ಲಿನ ಆಹಾರ ಕೊರತೆ ನೀಗಿಸಲು ಅನೇಕ ಕ್ರಮ ಕೈಗೊಳುವ ಮೂಲಕ ಹಸಿರು ಕ್ರಾಂತಿಯ ಹರಿಕರರಾದರು. ಭಾರತದ ಪ್ರಗತಿಯಲ್ಲಿ ಅವರ ಕೊಡುಗೆ ಅಗಾಧ ಎಂದರು.

ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರವೀಂದ್ರ ಉಪ್ಪಾರ, ಪರಿಶಿಷ್ಟ ವರ್ಗದ ಕಲ್ಯಾಣಾಧಿಕಾರಿ ಮಹಾಲಿಂಗಪ್ಪ ಇಂಗಳದಾಳ್, ಪುರಸಭೆ ಮುಖ್ಯಾಧಿಕಾರಿ ವೆಂಕಟಸ್ವಾಮಿ, ಜೆಇ ಶರಣಪ್ಪ, ವೆಂಕಟೇಶ, ಅಗ್ನಿಶಾಮಕ ಠಾಣಾಧಿಕಾರಿ ಗುರುರಾಜ, ಸಿಡಿಪಿಒ ರಾಧಾ, ಶಿರಸ್ತೇದಾರ್ ವಿನಯಕರಾವ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net