ವೆಂಕಟೇಶ್ವರ ಸ್ವಾಮಿಗೆ ಚಿನ್ನಾಭರಣ ಅಲಂಕಾರ

Untitled design (58)
ಮಾನ್ವಿ ತಾಲೂಕಿನ ಗೋರ್ಕಲ್ ಗ್ರಾಮದಲ್ಲಿ ಮಂಗಳವಾರ ಸಂಜೆ ಐತಿಹಾಸ ವೆಂಕಟೇಶ್ವರ ಸ್ವಾಮಿಯ ರಥೋತ್ಸವ ಜರುಗಿತು.
Published on

ಮಾನ್ವಿ: ತಾಲೂಕಿನ ಗೋರ್ಕಲ್ ಗ್ರಾಮದ ಐತಿಹಾಸಿಕ ವೆಂಕಟೇಶ್ವರ ಸ್ವಾಮಿಯ ಜಾತ್ರೋತ್ಸವ ಅಂಗವಾಗಿ ಮಂಗಳವಾರ ವೆಂಕಟೇಶ್ವರ ಸ್ವಾಮಿಯ ರಥೋತ್ಸವ ಅದ್ದೂರಿಯಾಗಿ ಜರುಗಿತು.

ಜಾತ್ರೆಯ ಅಂಗವಾಗಿ ವೆಂಕಟೇಶ್ವರ ಸ್ವಾಮಿಯ ಮೂರ್ತಿಗೆ ಬೆಳಗ್ಗೆ ಅಭಿಷೇಕ, ಮಹಾ ಮಂಗಳಾರತಿ ವಿಶೇಷವಾದ ಪೂಜೆಯನ್ನು ಸಲ್ಲಿಸಲಾಯಿತು. ಮಾನ್ವಿ ಪಟ್ಟಣದ ಉಪ ಖಜಾನೆಯಲ್ಲಿ ವೆಂಕಟೇಶ್ವರ ಸ್ವಾಮಿಯ ಮುಖ ಸೇರಿದಂತೆ ವಿವಿಧ ಬಂಗಾರದ ಆಭರಣಗಳನ್ನು ಪೊಲೀಸ್ ಭದ್ರತೆಯಲ್ಲಿ ಅಧಿಕಾರಿಗಳು ದೇವಸ್ಥಾನ ತಂದರು. ನಂತರ ಆಭರಣಗಳನ್ನು ವೆಂಕಟೇಶ್ವರ ಸ್ವಾಮಿಯ ಮೂರ್ತಿಗೆ ತೊಡಿಸಲಾಯಿತು.ಗೋರ್ಕಲ್ ಗ್ರಾಮ ಸೇರಿ ವಿವಿಧ ಹಳ್ಳಿಗಳ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ಸಂಜೆ ವೆಂಕಟೇಶ್ವರ ಸ್ವಾಮಿಯ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿಟ್ಟು ಮೆರವಣಿಗೆ ಮಾಡಲಾಯಿತು. ನಂತರ ರಥದಲ್ಲಿ ಪ್ರತಿಷ್ಠಾಪಿಸಿ ಭಕ್ತರು ಗೋವಿಂದ ನಾಮಸ್ಮರಣೆಯೊಂದಿಗೆ ವೆಂಕಟೇಶ್ವರ ಸ್ವಾಮಿಯ ರಥೋತ್ಸವ ನೆರವೇರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net