ಸರ್ಕಾರಿ ಯೋಜನೆಗಳನ್ನು ಜನರಿಗೆ ತಲುಪಿಸಿ, ಶಾಸಕ ರಾಜಾ ವೆಂಕಟಪ್ಪನಾಯಕ ಸಲಹೆ

Manvi Green Ceremony
ಮಾನ್ವಿ ತಹಸಿಲ್ ಕಚೇರಿಯಲ್ಲಿ ಕಂದಾಯ ದಿನ ನಿಮಿತ್ತ ಗುರುವಾರ ಆಯೋಜಿಸಿದ್ದ ಹಸಿರೋತ್ಸವ ಕಾರ್ಯಕ್ರಮದಲ್ಲಿ ಶಾಸಕ ರಾಜಾ ವೆಂಕಟಪ್ಪನಾಯಕ ಸಸಿ ನೆಟ್ಟು ನೀರುಣಿಸಿದರು.
Published on

ಮಾನ್ವಿ: ಸರ್ಕಾರ ಜಾರಿಗೊಳಿಸುವ ಪ್ರತಿ ಯೋಜನೆಗಳನ್ನು ಜನರಿಗೆ ತಲುಪಿಸಿ ಎಂದು ಶಾಸಕ ವೆಂಕಟಪ್ಪನಾಯಕ ಕಂದಾಯ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗೆ ಸಲಹೆ ನೀಡಿದರು.

ಪಟ್ಟಣದ ತಹಸಿಲ್ ಕಚೇರಿಯಲ್ಲಿ ಕಂದಾಯ ಇಲಾಖೆ ಸಂಘದಿಂದ ಗುರುವಾರ ಹಮ್ಮಿಕೊಡಿದ್ದ ಕಂದಾಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸರ್ಕಾರದ ಯೋಜನೆಗಳ ಯಶಸ್ಸಿನಲ್ಲಿ ಕಂದಾಯ ಅಧಿಕಾರಿಗಳ ಶ್ರಮವೂ ಇರುತ್ತದೆ. ರೈತರು, ಬಡವರು, ಕಾರ್ಮಿಕರು ಹಾಗೂ ವಿದ್ಯಾರ್ಥಿಗಳು ಸೇರಿ ಎಲ್ಲ ವರ್ಗಗಳ ಜನರಿಗೆ ಸಕಾಲದಲ್ಲಿ ವಿವಿಧ ಪ್ರಮಾಣಪತ್ರಗಳನ್ನು ನೀಡುತ್ತಿರುವ ಕಾರ್ಯ ಶ್ಲಾಘನೀಯ. ಇದು ಹೀಗೇ ಮುಂದುವರಿಯಲಿ ಎಂದರು. ಇದೇ ಸಂದರ್ಭ ಹಸಿರೋತ್ಸವ ಕಾರ್ಯಕ್ರಮದಡಿ ಸಸಿಗಳನ್ನು ನೆಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net