ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಿ

05012022 Manvi gust latuchers protest
Published on


ಮಾನ್ವಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕೆಂದು ಆಗ್ರಹಿಸಿ ತಹಸೀಲ್ದಾರ್ ಪರಶುರಾಮಗೆ ಎಸ್‌ಐಓ ತಾಲೂಕು ಘಟಕದಿಂದ ಬುಧವಾರ ಮನವಿ ಸಲ್ಲಿಸಲಾಯಿತು.

ಸೇವಾ ಭದ್ರತೆ, ಕಾಯಂ ಸೇರಿದಂತೆ ವಿವಿಧ ಬೇಡಿಕೆಗಳ ಈಡೆರಿಕೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಹಲವು ದಿನಗಳಿಂದ ಹೋರಾಟ ನಡೆಸುತ್ತಿದ್ದಾರೆ. ರಾಜ್ಯದ 440 ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ಗಳ 14,183 ಉಪನ್ಯಾಸಕರು ತರಗತಿ ಬಹಿಷ್ಕರಿಸಿ ಹೋರಾಟ ನಡೆಸುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಗೌರವಧನ ಹೆಚ್ಚಳ ಮಾಡಬೇಕು. ಉದ್ಯೋಗ ಭದ್ರತೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net