

ಮಾನ್ವಿ: ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಶಾಸಕ ರಾಜಾ ವೆಂಕಟಪ್ಪನಾಯಕ ಬುಧವಾರ ತರಾತುರಿಯಲ್ಲಿ ತಾಲೂಕು ಕ್ರೀಡಾಂಗಣ ಉದ್ಘಾಟಿಸಿದರು.
5 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ 2 ವರ್ಷಗಳ ಹಿಂದೆ ಶಂಕುಸ್ಥಾಪನೆ ಮಾಡಲಾಗಿತ್ತು. ತಾಲೂಕು ಕ್ರಿಡಾಂಗಣ ನಿರ್ಮಾಣದಿಂದ ಕ್ರೀಡಾಪಟುಗಳಿಗೆ ಹಾಗೂ ಹಿರಿಯ ನಾಗರಿಕರಿಗೆ ವಾಯು ವಿಹಾರಕ್ಕೆ ಅನುಕೂಲವಾಗಲಿದೆ. ಕ್ರೀಡಾಪಟುಗಳು ಕ್ರೀಡಾಂಗಣದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.