ಒಂದೇ ಸೂರಿನಡಿ ಸೇವೆ

14092022 Manavi Arogya card
Published on

ಮಾನ್ವಿ: ಕೇಂದ್ರ ಸರ್ಕಾರ ದೇಶದ ಜನರಿಗೆ ಒಂದೇ ಸೂರಿನಡಿ ಎಲ್ಲ ಆರೋಗ್ಯ ಸೇವೆಗಳು ದೊರೆಯಬೇಕೆಂದು ಉದ್ದೇಶದಿಂದ ಆಯುಷ್ಮಾನ್ ಭಾರತ ಕಾರ್ಡ್ ನೀಡುತ್ತಿದೆ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ ಹೇಳಿದರು.

ಪೋತ್ನಾಳದ ಗ್ರಾಪಂ ಸಭಾಂಗಣದಲ್ಲಿ ಮಂಗಳವಾರ ಆರೋಗ್ಯ ಮೇಳ ಹಾಗೂ ಆಯುಷ್ಮಾನ್ ಭಾರತ ಆರೋಗ್ಯ ಕಾರ್ಡ್ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಕಾರ್ಡ್ ಪಡೆದ ಬಿಪಿಎಲ್ ಕುಟುಂಬದವರು 5 ಲಕ್ಷ ರೂಪಾಯಿವರೆಗೆ, ಎಪಿಎಲ್ ಕುಟುಂಬದ ಸದಸ್ಯರು ಒಂದೂವರೆ ಲಕ್ಷ ರೂ. ಉಚಿತ ಆರೋಗ್ಯ ಸೇವೆ ಪಡೆಯಬಹುದು. ಗ್ರಾಮ ಒನ್ ಕೇಂದ್ರ, ಗ್ರಾಮ ಪಂಚಾಯಿತಿ ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಸ್ವವಿವರ ನೀಡುವ ಮೂಲಕ ಕಾರ್ಡ್ ಪಡೆಯಬಹುದಾಗಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net