

ಮಾನ್ವಿ: ಮಕ್ಕಳ ಶೈಕ್ಷಣಿಕ ಪ್ರಗತಿಗೆ ಜಾತಿ ಪ್ರಮಾಣ ಪತ್ರ ನೀಡಲು ಒತ್ತಾಯಿಸಿ ಜೋಗಿ ಅಲೆಮಾರಿಗಳ ಸಂಘ ತಹಸೀಲ್ದಾರ್ ಜಗದೀಶ್ ಚೌರ್‌ಗೆ ಬುಧ ವಾರ ಮನವಿ ಸಲ್ಲಿಸಿತು.
ಹಿಂದು ಜೋಗಿ, ಜೋಗೆರ್ ಸಮುದಾಯಕ್ಕೆ ಸರ್ಕಾರ ಜಾತಿ ಪಟ್ಟಿಯ ಪ್ರವರ್ಗ-1ರಲ್ಲಿ ಸೇರ್ಪಡೆ ಮಾಡಿತ್ತು. ಪ್ರಸಕ್ತ ಸಾಲಿನಲ್ಲಿ ಜಾತಿಪಟ್ಟಿಯಲ್ಲಿ ಸಮುದಾಯಗಳ ಹೆಸರಿಲ್ಲ. ಹೀಗಾಗಿ ಅರ್ಜಿ ಸಲ್ಲಿಸಿದರೂ ಕಂದಾಯ ಅಧಿಕಾರಿಗಳು ಪ್ರಮಾಣ ಪತ್ರ ನೀಡುತ್ತಿಲ್ಲ ಎಂದು ಜೋಗಿ ಅಲೆಮಾರಿಗಳ ಸಂಘದ ತಾಲೂಕಾಧ್ಯಕ್ಷ ದೇವರಾಜ್ ಪ್ರಭಳಕರ್ ಆಕ್ರೋಶ ವ್ಯಕ್ತಪಡಿಸಿದರು.
ಹಲವು ವರ್ಷಗಳಿಂದ ಜಾತಿ ಪ್ರಮಾಣ ಪತ್ರವನ್ನು ಪಡೆದುಕೊಂಡು ಶಿಕ್ಷಣ ಸೌಲಭ್ಯವನ್ನು ಪಡೆದುಕೊಳ್ಳಲಾಗಿದೆ. ಆದರೆ ಈಗ ಜಾತಿ ಪ್ರಮಾಣ ಪತ್ರ ನೀಡುತ್ತಿಲ್ಲ. ಇದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಲಿದೆ. ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.