

ಮಾನ್ವಿ: ಕುಷ್ಠರೋಗ, ಕ್ಷಯ ರೋಗಗಳು ಸಾಂಕ್ರಾಮಿಕವಾಗಿ ಒಬ್ಬರಿಂದ ಒಬ್ಬರಿಗೆ ಹರಡುತ್ತವೆ. ಅಲ್ಲದೆ ಮಳೆಗಾಲದಲ್ಲಿ ಡೆಂೆ ಕಾಯಿಲೆ ಹರಡುವ ಸಾಧ್ಯತೆ ಇರುತ್ತದೆ. ಹೀಗಾಗಿ ಸಾರ್ವಜನಿಕರು ಜಾಗೃತಿ ವಹಿಸಬೇಕು ಎಂದು ಜಿಲ್ಲಾ ರೋಗವಾಹಕ ಅಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಚಂದ್ರಶೇಖರಯ್ಯ ಸ್ವಾಮಿ ತಿಳಿಸಿದರು.
ಪಟ್ಟಣದ ತಹಸಿಲ್ ಕಚೇರಿಯಲ್ಲಿ ಶುಕ್ರವಾರ ಕುಷ್ಠರೋಗ ಪತ್ತೆ ಹಾಗೂ ಡೆಂೆ ಕುರಿತು ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಭೆಯಲ್ಲಿ ಡೆಂೆ ಜಾಗೃತಿ ಭಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಡೆಂೆ, ಮಲೇರಿಯಾ, ಚಿಕನ್ ಗುನ್ಯ ಕಾಯಿಲೆ ಬರದಂತೆ ತಡೆಯುವುದಕ್ಕೆ ಸೊಳ್ಳೆಗಳನ್ನು ನಿಯಂತ್ರಣ ಮಾಡುವುದು ಅಗತ್ಯವಾಗಿದೆ ಎಂದರು.
ಆಶಾ ಕಾರ್ಯಕರ್ತರು ಪ್ರತಿಯೊಂದು ಪಟ್ಟಣ ಹಾಗೂ ಗ್ರಾಮಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ಸಾಂಕ್ರಾಮಿಕ ಕಾಯಿಲೆಗಳ ಬಗ್ಗೆ ಸಮೀಕ್ಷೆ ನಡೆಸಬೇಕು. ನಂತರ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದಲ್ಲಿ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸುವುದಕ್ಕೆ ಸಾಧ್ಯವಾಗುತ್ತದೆ. ಹಾಗೂ ರೋಗಿಗಳನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡುವುದಕ್ಕೆ ಸುಲಭವಾಗಲಿದೆ. ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಕೂಡಾ ಆಶಾ ಕಾರ್ಯಕರ್ತರು ನಡೆಸುವ ಸಮೀಕ್ಷೆಗೆ ಅಗತ್ಯವಾದ ಸಹಕಾರ ನೀಡಬೇಕು ಎಂದುತಿಳಿಸಿದರು.
ತಹಸೀಲ್ದಾರ್ ರಾಜು ಪಿರಂಗಿ ಮಾತನಾಡಿ, ತಾಲೂಕಿನಲ್ಲಿ ಡೆಂೆ ಕಾಯಿಲೆ ಹರಡದಂತೆ ಪುರಸಭೆ ಹಾಗೂ ತಾಲೂಕು ಪಂಚಾಯಿತಿಯಿಂದ ಸೊಳ್ಳೆಗಳನ್ನು ನಿಯಂತ್ರಿಸುವುದಕ್ಕೆ ಫಾಗಿಂಗ್ ಸೇರಿ ಅಗತ್ಯ ಕ್ರಮ ಕೈಗೊಳುವಂತೆ ಸೂಚನೆ ನೀಡಿದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಶರಣಬಸವರಾಜ ಪಾಟೀಲ್, ಪುರಸಭೆ ಮುಖ್ಯಾಧಿಕಾರಿ ಗಂಗಾಧರ, ಆರೋಗ್ಯ ನಿರೀಕ್ಷಕ ಮಹೇಶಕುಮಾರ್, ಬಿಇಒ ಚಂದ್ರಶೇಖರ ದೊಡಮನಿ, ತಾಪಂ ವ್ಯವಸ್ಥಾಪಕ ಬಸವರಾಜ, ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.