ನಮ್ಮ ಕ್ಲಿನಿಕ್‌ನಲ್ಲಿ ಪ್ರಾಥಮಿಕ ಚಿಕಿತ್ಸೆ

Manvi Namma clinic inguration
ಮಾನ್ವಿ ಪಟ್ಟಣದ ಡಾ.ಅಂಬೇಡ್ಕರ್ ವೃತ್ತದಲ್ಲಿ ಶಾಸಕ ಹಂಪಯ್ಯ ನಾಯಕ ಅವರು ನಮ್ಮ ಕ್ಲಿನಿಕ್ ಉದ್ಘಾಟಿಸಿದರು. ತಾಲೂಕು ವೈದ್ಯಾಧಿಕಾರಿ ಡಾ.ಶರಣಬಸವಗೌಡ, ಉಪ ತಹಸೀಲ್ದಾರ್ ವಿನಾಯಕರಾವ್ ಇತರರಿದ್ದರು.
Published on

ಮಾನ್ವಿ: ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ರಾಜ್ಯ ಸರ್ಕಾರ ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ನಮ್ಮ ಕ್ಲಿನಿಕ್ ಆಸ್ಪತ್ರೆಗಳನ್ನು ಆರಂಭಿಸಿದೆ ಎಂದು ಶಾಸಕ ಹಂಪಯ್ಯ ನಾಯಕ ಹೇಳಿದರು.

ಪಟ್ಟಣದ ಡಾ.ಅಂಬೇಡ್ಕರ್ ವೃತ್ತದಲ್ಲಿ ಶನಿವಾರ ನಮ್ಮ ಕ್ಲಿನಿಕ್ ಉದ್ಘಾಟಿಸಿ ಮಾತನಾಡಿದರು. ನಮ್ಮ ಕ್ಲಿನಿಕ್‌ನಲ್ಲಿ ಪ್ರಾಥಮಿಕ ಚಿಕಿತ್ಸೆ ಸೌಲಭ್ಯವಿರುತ್ತದೆ. ಪ್ರತಿ ಕೇಂದ್ರದಲ್ಲಿ ಒಬ್ಬ ವೈದ್ಯ, ನರ್ಸ್, ಲ್ಯಾಬ್ ಟೆಕ್ನಿಷಿಯನ್, ಒಬ್ಬ ಸಹಾಯಕ ಇರುತ್ತಾರೆ. ಸಣ್ಣಪುಟ್ಟ ಕಾಯಿಲೆಗಳಿಗೆ ವೈದ್ಯರಿಂದ ಚಿಕಿತ್ಸೆ ಪಡೆಯಬಹುದು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ ವೈದ್ಯರು ಸಾರ್ವಜನಿಕ ಆಸ್ಪತ್ರೆಗೆ ಶಿಫಾರಸು ಮಾಡಲಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಇರುವ ಸೌಲಭ್ಯಗಳು ಸರ್ಕಾರಿ ಆಸ್ಪತ್ರೆಗಳಲ್ಲೂ ಇದ್ದು, ಜನರು ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಪುರಸಭೆ ಅಧ್ಯಕ್ಷೆ ಲಕ್ಷ್ಮೀ ವೀರೇಶ್, ಪುರಸಭೆ ಸದಸ್ಯ ರೇವಣಸಿದ್ದಯ್ಯ ಸ್ವಾಮಿ, ಪ್ರಮುಖರಾದ ಡಿ.ವೀರೇಶ, ಸುಬ್ರಹ್ಮಣ್ಯಂ, ಸತ್ತರ್ ಬಂಗ್ಲೆವಾಲಾ, ಟಿಎಚ್‌ಒ ಡಾ.ಶರಣಬಸವಗೌಡ, ಉಪ ತಹಸೀಲ್ದಾರ್ ವಿನಾಯಕರಾವ್, ಆರೋಗ್ಯ ಇಲಾಖೆ ಅರುಣ್‌ಕುಮಾರ ಇತರರಿದ್ದರು.

ಮಾನ್ವಿ ಪಟ್ಟಣದ ಡಾ.ಅಂಬೇಡ್ಕರ್ ವೃತ್ತದಲ್ಲಿ ಶಾಸಕ ಹಂಪಯ್ಯ ನಾಯಕ ಅವರು ನಮ್ಮ ಕ್ಲಿನಿಕ್ ಉದ್ಘಾಟಿಸಿದರು. ತಾಲೂಕು ವೈದ್ಯಾಧಿಕಾರಿ ಡಾ.ಶರಣಬಸವಗೌಡ, ಉಪ ತಹಸೀಲ್ದಾರ್ ವಿನಾಯಕರಾವ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net