ಹಳ್ಳಿಗಳ ಪ್ರಗತಿಯಿಂದ ದೇಶ ಅಭಿವೃದ್ಧಿ

18042022 Manvi NSS
Published on


ಮಾನ್ವಿ: ದೇಶ ಅಭಿವೃದ್ಧಿ ಹೊಂದಬೇಕಾದರೆ ಮೊದಲು ಗ್ರಾಮಗಳು ಅಭಿವೃದ್ಧಿಯಾಗಬೇಕು ಎಂದು ಕಲ್ಮಠ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿ ಸಂಗಯ್ಯಸ್ವಾಮಿ ಹೇಳಿದರು.

ತಾಲೂಕಿನ ಚೀಕಲಪರ್ವಿ ಗ್ರಾಮದಲ್ಲಿ ರಾಯಚೂರು ವಿಶ್ವವಿದ್ಯಾಲಯ ಹಾಗೂ ಕಲ್ಮಠ ಪದವಿ ಮಹಾವಿದ್ಯಾಲಯ ಆಶ್ರಯದಲ್ಲಿ ಅಮೃತ ಸಮುದಾಯ ಅಭಿವೃದ್ಧಿ ಯೋಜನೆಯಡಿ ಶನಿವಾರ ಏರ್ಪಡಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರದಲ್ಲಿ ಮಾತನಾಡಿದರು. ಗ್ರಾಮಗಳಲ್ಲಿ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಬೇಕಿದೆ. ಸ್ವಚ್ಛತೆ ಕಾಪಾಡಿದರೆ ಯಾವುದೇ ರೋಗಗಳು ಬರುವುದಿಲ್ಲ ಎಂದರು.

ಕಲ್ಮಠ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಎಸ್.ಎಸ್.ಪಾಟೀಲ್ ಮಾತನಾಡಿದರು. ಗ್ರಾಮದ ಮುಳ್ಳೂರು ರುದ್ರಗೌಡ ಶ್ರಮದಾನದ ಧ್ವಜಾರೋಹಣ ನೆರವೇರಿಸಿದರು. ಕಲ್ಮಠ ಪದವಿ ಕಾಲೇಜು ಪ್ರಾಚಾರ್ಯ ಸಿದ್ದನಗೌಡ ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು. ಗ್ರಾಮದ ಪ್ರಮುಖರಾದ ಮಲ್ಲನಗೌಡ ದಳಪತಿ, ದುರುಗಮ್ಮ ಹನುಮಂತ, ತಾಜುದ್ದೀನ್, ಲಕ್ಷ್ಮೀ ಹನುಮಂತ, ಮರಿಯಮ್ಮ ಲಕ್ಷ್ಮಣ, ಸಬ್ಜಮ್ಮ ಖಾಸಿಂಸಾಬ್, ಮಲ್ಲಯ್ಯ, ಹುಸೇನಿ, ವಿಶ್ವನಾಥ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net