ಸಮಾಜಮುಖಿ ಸೇವಾ ಕಾರ್ಯಕ್ರಮ ಆಯೋಜನೆ

17092022 Manvi Gangadhar nayak
Published on

ಮಾನ್ವಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಆ.2 ರವರೆಗೆ ಬಿಜೆಪಿ ಮಂಡಲ ಹಾಗೂ ವಿವಿಧ ಮೋರ್ಚಾಗಳಿಂದ ಸಾಮಾಜಿಕ ಸೇವಾ ಪಾಕ್ಷಿಕದಡಿ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಹಾಗೂ ಎಸ್‌ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಗಂಗಾಧರ ನಾಯಕ ಹೇಳಿದರು.

ಪಟ್ಟಣದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಕ್ತದಾನ ಶಿಬಿರ ಮತ್ತು ಸ್ವಚ್ಛತಾ ಅಭಿಯಾನ, ಸಸಿ ನೆಡುವುದು, ಆಸ್ಪತ್ರೆಗಳಿಗೆ ಭೇಟಿ, ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಸನ್ಮಾನ, ಪ್ರತಿ ಗ್ರಾಮಗಳಿಗೆ ತೆರಳಿ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಜಕ್ಕಲದಿನ್ನಿ, ವಕ್ತಾರ ಮಲ್ಲನಗೌಡ ನಕ್ಕುಂದಿ, ನಯೋಪ್ರಾ ಅಧ್ಯಕ್ಷ ಶರಣಪ್ಪಗೌಡ ನಕ್ಕುಂದಿ, ಪ್ರಮುಖರಾದ ಕೆ.ಬಸವಂತಪ್ಪ, ಅಮರೇಶಪ್ಪಗೌಡ, ಗುರುಗೌಡ ಕಣ್ಣೂರು, ರಾಮನಗೌಡ ಗವಿಗಟ್, ಸುಭಾಶ್ಚಂದ್ರ, ವೆಂಕಟೇಶ ನಾಯಕ, ಸುದರ್ಶನ್ ವಕೀಲ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net