ಟ್ರ್ಯಾಕ್ಟರ್ ಪಲ್ಟಿಯಾಗಿ 15 ಜನರಿಗೆ ಗಾಯ

241220 Manvi Tractor Pull Injury
ಮಾನ್ವಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಮಿಕರ ಯೋಗಕ್ಷೇಮವನ್ನು ಶಾಸಕ ರಾಜಾ ವೆಂಕಟಪ್ಪ ನಾಯಕ ಗುರುವಾರ ವಿಚಾರಿಸಿದರು.
Published on

ಮಾನ್ವಿ: ರಬ್ಬಣಕಲ್ ಬಳಿ ಭತ್ತ ನಾಟಿಗೆ ಕಾರ್ಮಿಕರನ್ನು ಕರೆದುದೊಯ್ಯುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ 15 ಜನ ಗುರುವಾರ ಗಾಯಗೊಂಡಿದ್ದು, ಏಳು ಜನರು ಪರಿಸ್ಥಿತಿ ಗಂಭೀರವಾಗಿದೆ. ಚಾಲಕನ ನಿರ್ಲಕ್ಷೃದಿಂದಾಗಿ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು, ಟ್ರಾಲಿಯಲ್ಲಿ ಕುಳಿತಿದ್ದ ಕಾರ್ಮಿಕರು ಕೆಳಗೆ ಬಿದ್ದಿದ್ದಾರೆ. ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಗೊಂಡ ಕಾರ್ಮಿಕರಿಗೆ ಚಿಕಿತ್ಸೆ ಕೊಡಿಸಲಾಗಿದೆ. ಗಂಭೀರ ಗಾಯಗೊಂಡ ಏಳು ಜನರನ್ನು ರಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ. ವಿಷಯ ತಿಳಿದು ಶಾಸಕ ರಾಜಾ ವೆಂಕಟಪ್ಪ ನಾಯಕ ಆಸ್ಪತ್ರೆಗೆ ತೆರಳಿ ಕಾರ್ಮಿಕರ ಯೋಗಕ್ಷೇಮ ವಿಚಾರಿಸಿ, ವೈದ್ಯರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net