ಮಾನ್ವಿಯಲ್ಲಿ ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ಬೀಗ ಜಡಿದ ಪುರಸಭೆ ಮುಖ್ಯಾಧಿಕಾರಿ

150420 Manvi Rules Break Shop Lock
Published on

ಮಾನ್ವಿ: ಲಾಕ್‌ಡೌನ್ ವಿಸ್ತರಣೆಯಾಗಿದ್ದು, ನಿಯಮ ಉಲ್ಲಂಘಿಸಿ ಪಟ್ಟಣದಲ್ಲಿ ತೆರೆದಿದ್ದ 9 ಅಂಗಡಿಗಳಿಗೆ ಪುರಸಭೆ ಮುಖ್ಯಾಧಿಕಾರಿ ಎಂ.ವಿಜಯಲಕ್ಷ್ಮಿಬೀಗ ಜಡಿದರು. ಲಾಕ್‌ಡೌನ್ ಮುಗಿಯುವ ವರೆಗೆ ಕಿರಾಣಿ, ತರಕಾರಿ ಮತ್ತು ಹಣ್ಣಿನ ಅಂಗಡಿಗಳಿಗೆ ಮಾತ್ರ ಮಧ್ಯಾಹ್ನ 12 ವರೆಗೆ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಅದನ್ನು ಬಿಟ್ಟು ಬೇರೆ ಅಂಗಡಿಗಳು ತೆಗೆದರೆ ಅಂಥವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಕಿರಾಣಿ ಅಂಗಡಿ ವರ್ತಕರು ಮಾಸ್ಕ್ ಧರಿಸದೆ ವ್ಯಾಪಾರ ಮಾಡಬಾರದು, ಅಂಗಡಿ ಮುಂದೆ ಸ್ಯಾನಿಟೈಸರ್, ಕೈತೊಳೆಯಲು ಸೋಪು ಇಡಬೇಕು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಪರವಾನಗಿ ಪಡೆಯದೆ ವ್ಯಾಪಾರ ನಡೆಸಿದರೆ ಅಂತಹ ಅಂಗಡಿಗಳಿಗೆ ಬೀಗಮುದ್ರೆ ಹಾಕಿ ವರ್ತಕರ ವಿರುದ್ಧ ಸೂಕ್ತ ಕ್ರಮಕ್ಕೆ ಮುಂದಾಗಲಾಗುವುದು ಎಂದು ಎಚ್ಚರಿಸಿದರು. ಸಿಡಿಪಿಒ ಸುಭದ್ರಾ ದೇವಿ, ಪುರಸಭೆ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net