ಸೋಲು-ಗೆಲುವು ಸಹಜವಾಗಿ ಸ್ವೀಕರಿಸಿ

060822 Potna Zonal Level Sports Event
ಮಾನ್ವಿ ತಾಲೂಕಿನ ಪೋತ್ನಾಳ ಗ್ರಾಮದಲ್ಲಿ ಶಾಸಕ ರಾಜಾ ವೆಂಕಟಪ್ಪನಾಯಕ ವಲಯ ಮಟ್ಟದ ಕ್ರೀಡಾಕೂಟದ ಜ್ಯೋತಿಯನ್ನು ಶನಿವಾರ ಬೆಳಗಿಸಿದರು.
Published on

ಮಾನ್ವಿ: ಪ್ರತಿಯೊಂದು ಕ್ರೀಡಾಕೂಟಗಳಲ್ಲಿ ಸೋಲು-ಗೆಲವು ಇದ್ದೇ ಇರುತ್ತದೆ ಸೋಲು ಮುಂದೊಂದು ದಿನ ಗೆಲುವಿಗೆ ಕಾರಣವಾಗುತ್ತದೆ ಎಂದು ಶಾಸಕ ರಾಜಾ ವೆಂಕಟಪ್ಪನಾಯಕ ಹೇಳಿದರು.

ತಾಲೂಕಿನ ಪೋತ್ನಾಳ ಗ್ರಾಮದ ಪ್ರೌಢಶಾಲೆಯಲ್ಲಿ ಶನಿವಾರ ಜಿಪಂ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಇಲಾಖೆ ಇತರೆ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಲಯ ಮಟ್ಟದಿಂದ ತಾಲೂಕು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಗೆಲವು ಸಾಧಿಸಿ ಶಾಲೆ ಮತ್ತು ತಾಲೂಕಿಗೆ ಕೀರ್ತಿ ತರಬೇಕು, ಪಠ್ಯೇತರ ಚಟುವಟಿಕೆಗಳ ಜೊತೆಗೆ ಕ್ರೀಡಾಸಕ್ತಿ ಬೆಳಸಿಕೊಳ್ಳಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net