

ಮಾನ್ವಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಸುರಕ್ಷತೆಗಾಗಿ ಕರೊನಾ ನಿಯಮಗಳನ್ನು ಪಾಲಿಸಬೇಕು ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು.
ಪಟ್ಟಣದ ಕಾಕತೀಯ ಫ್ರೌಢ ಶಾಲೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಕಸ್ಟೋಡಿಯನ್, ತಾಲೂಕು ಅಧಿಕಾರಿಗಳ ಪೂರ್ವಸಿದ್ಧ್ದತಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಮಾಸ್ಕ್, ಸ್ಯಾನಿಟೈಸರ್ ಬಳಸಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಅಧಿಕಾರಿಗಳು ಕಾಳಜಿ ವಹಿಸಬೇಕು ಎಂದು ಸೂಚಿಸಿದರು.
ಬಿಇಒ ವೆಂಕಟೇಶ ಗುಡಿಹಾಳ ಮಾತನಾಡಿ, ಮಾನ್ವಿ ಮತ್ತು ಸಿರವಾರ ತಾಲೂಕುಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಾಗಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದರು. ಗ್ರೇಡ್-2 ತಹಸೀಲ್ದಾರ್ ಅಬ್ದುಲ್ ವಾಹಿದ್, ಇಒ ಶರಣಬಸವ, ತಾಲೂಕು ವೈದ್ಯಾಧಿಕಾರಿ ಚಂದ್ರಶೇರಯ್ಯಸ್ವಾಮಿ ಮಾತನಾಡಿದರು. ಅಕ್ಷರ ದಾಸೋಹ ಅಧಿಕಾರಿ ಸುರೇಶನಾಯಕ ಸೇರಿ ಮಾನ್ವಿ, ಸಿರವಾರ ತಾಲೂಕಿನ ಪರೀಕ್ಷಾ ಕೇಂದ್ರಗಳ ಮುಖ್ಯ ಅಧಿಕ್ಷಕರು, ಕಸ್ಟೋಡಿಯನ್, ತಾಲೂಕು ಅಧಿಕಾರಿಗಳು ಇದ್ದರು.