

ರಾಯಚೂರು: ಸ್ಥಳೀಯ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ 57 ವರ್ಷದ ಕರೊನಾ ಸೋಂಕಿತ ಎಎಸ್‌ಐ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದ್ದಾರೆ. ಮಾನ್ವಿ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಎಎಸ್‌ಐ ಉಸಿರಾಟದ ಸಮಸ್ಯೆಯಿಂದ ಆ.4ರಂದು ಒಪೆಕ್ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ಪರೀಕ್ಷೆ ನಡೆಸಿದಾಗ ವರದಿ ಪಾಸಿಟಿವ್ ಬಂದಿತ್ತು. ಚಿಕಿತ್ಸೆ ಫಲಕಾರಿಯಾಗದೆ ಹೃದಯಾಘಾತದಿಂದ ಶನಿವಾರ ಮೃತಪಟ್ಟಿದ್ದು, ಕೋವಿಡ್ ಮಾರ್ಗಸೂಚಿಯಂತೆ ಅಂತ್ಯಕ್ರಿಯೆ ನಡೆಸಲಾಗಿದೆ.