ತಾಲೂಕು ಆಡಳಿತ ಸೌಧ ನಿರ್ಮಾಣಕ್ಕೆ 10 ಕೊಟಿ ರೂ.

MLA Raja Venkatappa Nayaka
Published on

ಮಾನ್ವಿ: ಪಟ್ಟಣದಲ್ಲಿ ತಾಲೂಕು ಆಡಳಿತ ಸೌಧ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿ 10 ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ಕಂದಾಯ ಸಚಿವಗೆ ಮನವಿ ಸಲ್ಲಿಸಿ ಒತ್ತಾಯಿಸಿರುವುದಾಗಿ ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು.

ಪಟ್ಟಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಆಡಳಿತ ಸೌಧ ನಿರ್ಮಿಸಲು ಸರ್ವೇ ನಂ. 456, 463 ರಲ್ಲಿ 7.28 ಎಕರೆ ಪ್ರದೇಶವನ್ನು ಕಂದಾಯ ಇಲಾಖೆ ಸ್ವಾಧೀನಕ್ಕೆ ತೆಗೆದುಕೊಂಡಿದೆ. ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಕ್ಷುಲ್ಲಕ ರಾಜಕಾರಣ ಮಾಡುವ ಪ್ರಶ್ನೆಯಿಲ್ಲ ಕಳೆದ 20 ವರ್ಷ ಆಡಳಿತ ನಡೆಸಿರುವವರು ನನ್ನ 3 ವರ್ಷ ಅವಧಿಯ ಆಡಳಿತವನ್ನು ತಾಳೆ ಹಾಕುತ್ತಿರುವುದು ಹಾಸ್ಯಾಸ್ಪದ ಎಂದರು.

ತಾಯಿ ಮಕ್ಕಳ ಆಸ್ಪತ್ರೆ ಉದ್ಘಾಟನೆ ಮತ್ತು ಅನುದಾನ ಬಿಡುಗಡೆ ವಿಷಯಕ್ಕೆ ಸಂಬಂಧಿಸದಂತೆ ಸತ್ಯ ಸಂಗತಿ ಹೇಳಿದ್ದೇನೆ ಹೊರತು ಯಾರ ಮನಸನ್ನು ನೋಯಿಸುವ ಉದ್ದೇಶ ಇಲ್ಲ. ಮಾಜಿ ಶಾಸಕರು ನನ್ನ ಮೇಲೆ ವಿನಾಕಾರಣ ಆರೋಪ ಮಾಡುವುದು ಸಲ್ಲದು. ಕ್ಷೇತ್ರದ ಅಭಿವೃದ್ದಿ ವಿಚಾರದಲ್ಲಿ ಸಲಹೆ ಸೂಚನೆಗಳನ್ನು ನೀಡಿದರೆ ಸ್ವೀಕರಿಸುತ್ತೇನೆ. ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ರಾಜಾ ವೆಂಕಟಪ್ಪ ನಾಯಕ ತಿಳಿಸಿದರು. ಜೆಡಿಎಸ್ ಯುವ ಘಟಕ ಉಪಾಧ್ಯಕ್ಷ ರಾಜಾ ರಾಮಚಂದ್ರ ನಾಯಕ, ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನಗೌಡ ಬಲ್ಲಟಗಿ, ಮುಖಂಡರಾದ ಗೋಪಾಲ ನಾಯಕ ಹರವಿ, ಮಹ್ಮದ್ ಇಸ್ಮಾಯಿಲ್, ಖಲೀಲ್ ಖುರೇಶಿ, ಜೆ.ಎಚ್.ದೇವರಾಜ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net