ಸಾರಿಗೆ ಬಸ್ ನಿಲ್ಲಿಸುವಂತೆ ಆಗ್ರಹಿಸಿ ರಸ್ತೆ ಸಂಚಾರ ತಡೆದ ಶಾಲಾ-ಕಾಲೇಜು ವಿದ್ಯಾರ್ಥಿಗಳು

030322 Manvi Students Protest for Bus
ಮಾನ್ವಿ ಪಟ್ಟಣದ ನೀರಮಾನ್ವಿ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ಗುರುವಾರ ವಿದ್ಯಾರ್ಥಿಗಳು ಸಾರಿಗೆ ಬಸ್ ಸಂಚಾರ ತಡೆದು ರಸ್ತೆ ತಡೆ ನಡೆಸಿದರು.
Published on

ಮಾನ್ವಿ: ತಾಲೂಕಿನ ನೀರಮಾನ್ವಿ ಗ್ರಾಮದಲ್ಲಿ ಸಾರಿಗೆ ಬಸ್ ನಿಲುಗಡೆಗೆ ಮಾಡದಿರುವುದನ್ನು ಖಂಡಿಸಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಗುರುವಾರ ರಸ್ತೆ ತಡೆ ನಡೆಸಿದರು.

ಬಸ್ ಚಾಲಕರು ಬಸ್‌ಗಳನ್ನು ನಿಲ್ಲಿಸದೇ ಹಾಗೇ ಹೋಗುವುದರಿಂದ ಮಾನ್ವಿ ಪಟ್ಟಣದ ಶಾಲಾ-ಕಾಲೇಜುಗಳಿಗೆ ಸಮಯಕ್ಕೆ ಸರಿಯಾಗಿ ತೆರಳು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಇದನ್ನು ಅರಿತ ವಿದ್ಯಾರ್ಥಿಗಳು ಕೆಲ ಹೊತ್ತು ಸಂಚಾರ ರಸ್ತೆ ತಡೆ ನಡೆಸಿದರು.

ಪಿಐ ಮಹಾದೇವಪ್ಪ ಸಂಚಾರ ರಸ್ತೆ ತಡೆ ಹಿಂದಕ್ಕೆ ಪಡೆಯುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರೂ ವಿದ್ಯಾರ್ಥಿಗಳು ಡಿಪೋ ಮ್ಯಾನೇಜರ್ ಬಂದು ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂದಕ್ಕೆ ಪಡೆಯುವುದಾಗಿ ಪಟ್ಟು ಹಿಡಿದರು. ಬಸ್ ನಿಲ್ಲಿಸಲು ಘಟಕ ವ್ಯವಸ್ಥಾಪಕರ ಗಮನಕ್ಕೆ ತಂದು ವ್ಯವಸ್ಥೆ ಕೈಗೊಳ್ಳುವುದಾಗಿ ಹೇಳಿದ ನಂತರ ವಿದ್ಯಾರ್ಥಿಗಳು ಪ್ರತಿಭಟನೆ ಹಿಂದಕ್ಕೆ ಪಡೆದರು.

ಪ್ರತಿದಿನ ಬಸ್ ಚಾಲಕರು ಗ್ರಾಮದಲ್ಲಿ ಸಾರಿಗೆ ಬಸ್ ನಿಲುಗಡೆ ಇದ್ದರೂ ಬಸ್ ನಿಲ್ಲಿಸದೇ ಹೋಗುತ್ತಾರೆ ಇದರಿಂದ ಶಾಲಾ-ಕಾಲೇಜಿಗೆ ತೆರಳಲು ತೊಂದರೆಯಾಗುತ್ತಿದೆ. ಈಗ ಪರೀಕ್ಷೆಗಳು ಪ್ರಾರಂಭವಾಗಿವೆ ಬಸ್ ನಿಲುಗಡೆ ಮಾಡದಿದ್ದರೆ ಪರೀಕ್ಷೆಗೆ ಗೈರು ಆಗಬೆೇಕಾಗುತ್ತದೆ ಎಂದು ವಿದ್ಯಾರ್ಥಿಗಳು ಪಿಐ ಮಹಾದೇವಪ್ಪ ಮುಂದೆ ಅಳಲು ತೋಡಿಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net