ಉದ್ಭವ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ

mnv-1
ಮಾನ್ವಿ ಪಟ್ಟಣದಲ್ಲಿ ಉದ್ಭವ ಆಂಜನೇಯ ಸ್ವಾಮಿಗೆ ವಿಶೇಷ ಅಲಂಕಾರ ಮಾಡಿರುವುದು.
Published on

ಮಾನ್ವಿ: ಪಟ್ಟಣದ ಎಪಿಎಂಸಿ ಆವರಣದಲ್ಲಿನ ಉದ್ಭವ ಆಂಜನೇಯ ಸ್ವಾಮಿ ದೇವಸ್ಥಾನದ 22 ನೇ ವಾರ್ಷಿಕೋತ್ಸವ ಅಂಗವಾಗಿ ಶನಿವಾರ ಬೆಳಗ್ಗೆ ಸುಪ್ರಭಾತ, ಪವಮಾನ ಹೋಮ, ಪೂರ್ಣಾಹುತಿ, ಪಂಚಾಮೃತ ಅಭಿಷೇಕ, ತುಳಸಿ-ಪುಷ್ಪಾರ್ಚನೆ ಹಾಗೂ ವಿಶೇಷ ಪೂಜೆ, ಅಲಂಕಾರ ನೆರವೇರಿಸಲಾಯಿತು.

ಪಟ್ಟಣದ ಪ್ರವಾಸಿ ಮಂದಿರದ ಬಳಿ ಇರುವ ಲಕ್ಷ್ಮೀದೇವಿ ದೇವಸ್ಥಾನದಿಂದ ಪ್ರಮುಖ ಬೀದಿಗಳ ಮೂಲಕ ಉದ್ಭವ ಆಂಜನೇಯ ಸ್ವಾಮಿ ದೇವಸ್ಥಾನದವರೆಗೆ ಮೆರವಣಿಗೆ ಸಾಗಿತು. ಪೂರ್ಣಕುಂಭ ಹೊತ್ತ ಮಹಿಳೆಯರು, ವೀರಗಾಸೆ ಸೇರಿದಂತೆ ಜನಪದ ಕಲಾ ತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು

ಕಾರ್ಯಕ್ರಗಳ ನಂತರ ಭಕ್ತರಿಗೆ ಪ್ರಸಾದ ವಿತರಣೆ ಜರುಗಿತು. ಸಂಜೆ ಗಂಟೆಗೆ ಉದ್ಭವ ಆಂಜನೇಯ ಸ್ವಾಮಿ ರಥೋತ್ಸವ ಜರುಗಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net