ಗ್ರಾಮ ವಿದ್ಯುತ್ ಪ್ರತಿನಿಧಿಗಳನ್ನು ಕಾಯಂಗೊಳಿಸಿ

050922 Manvi Appeal from GVP Taluk Unit
ಉಚ್ಚ ನ್ಯಾಯಾಲಯದ ಆದೇಶದನ್ವಯ ಗ್ರಾಮ ವಿದ್ಯುತ್ ಪ್ರತಿನಿಧಿಗಳ ಸೇವೆ ಕಾಯಂಗೊಳಿಸಲು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಜಿವಿಪಿ ತಾಲೂಕು ಘಟಕದಿಂದ ಶಾಸಕ ರಾಜಾ ವೆಂಕಟಪ್ಪ ನಾಯಕಗೆ ಮನವಿ ಸಲ್ಲಿಸಲಾಯಿತು.
Published on

ಮಾನ್ವಿ: ಉಚ್ಚ ನ್ಯಾಯಾಲಯದ ಆದೇಶದನ್ವಯ ಗ್ರಾಮ ವಿದ್ಯುತ್ ಪ್ರತಿನಿಧಿಗಳ ಸೇವೆ ಕಾಯಂಗೊಳಿಸಲು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಆಗ್ರಹಿಸಿ ಶಾಸಕ ರಾಜಾ ವೆಂಕಟಪ್ಪನಾಯಕಗೆ ಅಖಿಲ ಕರ್ನಾಟಕ ಗ್ರಾಮ ವಿದ್ಯುತ್ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ ತಾಲೂಕ ಘಟಕ ಸೋಮವಾರ ಶಾಸಕರ ಭವನದಲ್ಲಿ ಮನವಿ ಸಲ್ಲಿಸಿತು.

ಜಿವಿಪಿ ತಾಲೂಕ ಅಧ್ಯಕ್ಷ ಎ.ಕೇಶವಮೂರ್ತಿ ಕೊಟ್ನೆಕಲ್ ಮಾತನಾಡಿ, ಕಳೆದ ಹಲವು ವರ್ಷಗಳಿಂದ ವಿದ್ಯುತ್ ಸರಬರಾಜು ಇಲಾಖೆಯಲ್ಲಿ (ಜೆಸ್ಕಾಂ) ಗ್ರಾಮ ವಿದ್ಯುತ್ ಪ್ರತಿನಿಧಿಗಳಾಗಿ ಸೇವೆ ಸಲ್ಲಿಸುತ್ತಿರುವವರನ್ನು ಉಚ್ಚ ನ್ಯಾಯಾಲಯದ ಆದೇಶದನ್ವಯ ಕಾಯಂ ಮಾಡಬೇಕು. ಸಾಮಾಜಿಕ ಭದ್ರತೆ ಸೇರಿ ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿದರು.

ಸೆ.6ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶ್ರಮ ಜೀವಿಗಳ ವೇದಿಕೆ ಹಾಗೂ ಕರ್ನಾಟಕ ಗ್ರಾಮ ವಿದ್ಯುತ್ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದಡಿ ರಾಜ್ಯದ ಗ್ರಾಮ ವಿದ್ಯುತ್ ಪ್ರತಿನಿಧಿಗಳ ಸೇವೆ ಕಾಯಂಗಾಗಿ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net